ಬೆಂಗಳೂರು : ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದವರಿಗೆ ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಗುಡ್ ನ್ಯೂಸ್ ನೀಡಿದ್ದು, ಶೀಘ್ರವೇ ಬಿಪಿಎಲ್ ಕಾರ್ಡ್ ವಿತರಣೆ ಮಾಡುತ್ತೇನೆ ಎಂದು ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ‘ ಬಿಪಿಎಲ್ ಪಡಿತರ ಚೀಟಿ ಕೋರಿ ಅರ್ಜಿ ಸಲ್ಲಿಸಿರುವವರಿಗೆ ಕಾರ್ಡ್ಗಳನ್ನು ಆದಷ್ಟು ಬೇಗ ನೀಡುವ ಪ್ರಕ್ರಿಯೆಯನ್ನು ಸರ್ಕಾರ ನಡೆಸಲಿದೆ. ಎಲ್ಲ ಅರ್ಜಿಗಳನ್ನು ಪರಿಶೀಲಿಸಿ ಕಾರ್ಡ್ ವಿತರಿಸಲಾಗುವುದು’, ಹೊಸದಾಗಿ ಬಿಪಿಎಲ್ ಕಾರ್ಡ್ ಕೋರಿ 3 ಲಕ್ಷ ಅರ್ಜಿಗಳು ಬಂದಿವೆ. ಎಂದು ಸಚಿವ ಕೆ.ಎಚ್ ಮುನಿಯಪ್ಪ ಹೇಳಿದರು.
ವೈದ್ಯಕೀಯ ಸೇವೆಗೆ ಪ್ರತ್ಯೇಕ ಪಡಿತರ ಚೀಟಿ ನೀಡಲು ಚಿಂತನೆ ನಡೆಸಲಾಗಿದೆ , ಮನೆ ಮನೆ ಸರ್ವೆ ಮಾಡಿ ಸಲಹೆ ಪಡೆದು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ. ಎಂದು ಆಹಾರ ಮತ್ತು ನಾಗರಿಕ ಸರಬರಾಜುs ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದರು.ಆರೋಗ್ಯ ಸೇವೆಗಾಗಿಯೇ ಪ್ರತ್ಯೇಕ ಪಡಿತರ ಚೀಟಿ ನೀಡಲು ಚಿಂತನೆ ನಡೆಸಲಾಗಿದೆ. ಈ ಬಗ್ಗೆ ಮನೆ ಮನೆ ಸರ್ವೆ ಮಾಡಿ ಸಲಹೆ ಪಡೆದು ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ. ಇದರಿಂದ ಎಷ್ಟು ಜನ ಅಕ್ಕಿ ಮತ್ತು ಆರೋಗ್ಯ ಸೇವೆ ಎರಡನ್ನೂ ಕೂಡ ಬಯಸುತ್ತಾರೆ ಎಂಬುದು ಗೊತ್ತಾಗಲಿದೆ ಎಂದರು.
ಬಿಪಿಎಲ್ ಕಾರ್ಡ್ಗಾಗಿ ಹೊಸದಾಗಿ ಮೂರು ಲಕ್ಷ ಅರ್ಜಿಗಳು ಬಂದಿದ್ದು, ವೈದ್ಯಕೀಯ ಸೌಲಭ್ಯದ ಅಗತ್ಯ ಇರುವವರಿಗೆ ಆದ್ಯತೆ ನೀಡಲಾಗುವುದು. ಪರಿಶೀಲನೆ ನಡೆಸಿ ಅರ್ಹತೆಯುಳ್ಳವರಿಗೆ ನೀಡಲಾಗುವುದು. ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ಹಣ ವರ್ಗಾವಣೆಯಾಗುತ್ತಿದ್ದು, ರಾಜ್ಯದಲ್ಲಿ 1, 28,17,337 ಪಡಿತರಚೀಟಿದಾರರು ಇದ್ದು, 97,27,165 ಪಡಿತರಚೀಟಿದಾರರಿಗೆ ಈ ರೀತಿ ಅಕ್ಕಿ ಬದಲು ಹಣ ವರ್ಗಾವಣೆಯಾಗಲಿದೆ ಎಂದರು.