ಬೆಂಗಳೂರು : ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿರುವವರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಹೊಸ ಪಡಿತರ ಚೀಟಿ ವಿತರಣೆ ಮಾಡಲು ನಿರ್ಧರಿಸಿದೆ.
ಪಡಿತರ ಚೀಟಿ ತಿದ್ದುಪಡಿಗೆ ಸೆಪ್ಟೆಂಬರ್ 1 ರಿಂದ 14ರ ವರೆಗೆ ಅವಕಾಶ ನೀಡಿತ್ತು.ಇದೀಗ ರಾಜ್ಯ ಸರ್ಕಾರವು ಮತ್ತೊಮ್ಮೆ ಅವಕಾಶ ನೀಡಿದೆ. ಈ ಹಿನ್ನೆಲೆಯಲ್ಲಿ ಲಕ್ಷಾಂತರ ಜನರು ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ ಮಾಡಿಕೊಂಡಿದ್ದು, ಹಲವು ಮಹಿಳೆಯರು ಗೃಹಲಕ್ಷ್ಮೀ ಯೋಜನೆಯ ಲಾಭ ಪಡೆದುಕೊಂಡಿದ್ದಾರೆ.
ಪಡಿತರ ಚೀಟಗೆ ಈಗಾಗಲೇ ಅರ್ಜಿ ಸಲ್ಲಿಸಿದವರ ಅರ್ಜಿಗಳ ಪರಿಶೀಲನಾ ಕಾರ್ಯ ಶೇ.75ರಷ್ಟು ಪರಿಶೀಲನಾ ಕಾರ್ಯ ಪೂರ್ಣಗೊಂಡಿದೆ. ಪರಿಶೀಲನಾ ಕಾರ್ಯ ಸಂಪೂರ್ಣವಾಗಿ ಮುಗಿದ ನಂತರದಲ್ಲಿ ಅರ್ಜಿ ಸಲ್ಲಿಸಿದವರ ಪೈಕಿ ಅರ್ಹರಿಗೆ ಮಾತ್ರವೇ ಪಡಿತರ ಚೀಟಿ ಕೈ ಸೇರಲಿದೆ.
ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದವರಿಗೆ ಶೀಘ್ರದಲ್ಲಿಯೇ ಪಡಿತರ ಚೀಟಿ ವಿತರಣೆ ಮಾಡಲಾಗುತ್ತದೆ. ಈಗಾಗಲೇ ಅರ್ಜಿ ಸಲ್ಲಿಸಿರುವವರ ಕಾರ್ಡುಗಳ ವಿಲೇವಾರಿ ಆದ ನಂತರದಲ್ಲಿ ಹೊಸದಾಗಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುತ್ತದೆ.