ಮಂಗಳೂರು : ಸರ್ಕಾರಿ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಸಿಎಂ ಸಿದ್ದರಾಮಯ್ಯ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಶೀಘ್ರವೇ ಶಿಕ್ಷಕರ ಸೇರಿ ಖಾಲಿ ಇರುವ ಎರಡೂವರೆ ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು ಮಾತನಾಡಿ, ಶಿಕ್ಷಕರು, ವೈದ್ಯರು ಸೇರಿದಂತೆ ಎಲ್ಲಾ ರೀತಿಯ ಹುದ್ದೆಗಳು ಖಾಲಿ ಇವೆ.ಹಂತ ಹಂತವಾಗಿ ಎಲ್ಲಾ ಹುದ್ದೆಗಳ ಭರ್ತಿಗೆ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಖಾಲಿ ಹುದ್ದೆಗೆ ತಾತ್ಕಾಲಿಕವಾಗಿ ಹೊರಗುತ್ತಿಗೆ ತೆಗೆದುಕೊಳ್ಳಲು ಚಿಂತನೆ ನಡೆದಿದೆ. ಒಂದೇ ಬಾರಿಗೆ ಎರಡೂವರೆ ಲಕ್ಷ ಖಾಲಿ ಹುದ್ದೆಗಳ ಭರ್ತಿ ಸಾಧ್ಯವಿಲ್ಲ. ಹಾಗಾಗಿ ಹಂತ ಹಂತವಾಗಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುತ್ತೇವೆ ಎಂದು ಸಿಎಂ ತಿಳಿಸಿದ್ದಾರೆ.