ರಾಜ್ಯದಲ್ಲಿ ಈ ಬಾರಿ ಹಿಂದೆಂದೂ ಕಂಡರಿಯದಂತಹ ಸುಡು ಬಿಸಿಲು ಜನಸಾಮಾನ್ಯರನ್ನು ಕಂಗೆಡಿಸಿದೆ. 10 ಗಂಟೆಯ ಬಳಿಕ ಹೊರಗೆ ಹೋಗಲೂ ಸಹ ಹಿಂದೇಟು ಹಾಕುವಂತಾಗಿದ್ದು, ತಾಪಮಾನದಿಂದ ಹೈರಾಣಾಗಿದ್ದವರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ.
ಎರಡು ದಿನಗಳ ನಂತರ ರಾಜ್ಯದಲ್ಲಿ ಎರಡರಿಂದ ಮೂರು ಡಿಗ್ರಿ ಸೆಲ್ಸಿಯಸ್ ನಷ್ಟು ತಾಪಮಾನ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು ಅಲ್ಲದೆ ವಿವಿಧ ಜಿಲ್ಲೆಗಳಲ್ಲಿ ಈಗ ಸುರಿಯುತ್ತಿರುವ ಮುಂಗಾರು ಪೂರ್ವ ಮಳೆ ಮುಂದಿನ 48 ಗಂಟೆಗಳ ಕಾಲ ಮುಂದುವರಿಯಲಿದೆ ಎಂದು ಹೇಳಿದೆ.
ಮೇ 9ರ ಇಂದು ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಗುಡುಗು – ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಇನ್ನುಳಿದಂತೆ ಶಿವಮೊಗ್ಗ, ತುಮಕೂರು, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ಬಳ್ಳಾರಿ, ಹಾಸನ, ಕೋಲಾರ, ಮಂಡ್ಯ, ಮೈಸೂರು, ವಿಜಯನಗರ, ದಕ್ಷಿಣ ಕನ್ನಡ, ಬೀದರ್, ಕಲಬುರಗಿ ಜಿಲ್ಲೆಗಳ ಕೆಲ ಸ್ಥಳಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ.