ಬೆಂಗಳೂರು : ಅರಣ್ಯ ವ್ಯಾಪ್ತಿಯಲ್ಲಿ ಉಳುಮೆ ಮಾಡುತ್ತಿರುವ ರೈತರಿಗೆ ಸಚಿವ ಈಶ್ವರ್ ಖಂಡ್ರೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮೂರು ತಿಂಗಳಲ್ಲಿ ಹಕ್ಕು ವಿತರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1978ರ ಪೂರ್ವದಿಂದಲೂ ಅರಣ್ಯ ವ್ಯಾಪ್ತಿಯಲ್ಲಿ ನೆಲೆಸಿರುವವರು, ಅರಣ್ಯ ವ್ಯಾಪ್ತಿಯಲ್ಲಿ ಕೃಷಿ ಮಾಡುತ್ತಿದ್ದವರಿಗೆ ಹಕ್ಕು ಪತ್ರ ವಿತರಣೆ ಮಾಡಲು ಮುಖ್ಯಮಂತ್ರಿಗಳು ಕೂಡ ಸೂಚನೆ ಕೊಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ಅರಣ್ಯ, ಅರಣ್ಯದಂಚಿನಲ್ಲಿ ವಾಸವಿರುವವರು, ಉಳುಮೆ ಮಾಡುವವರ ಪಟ್ಟಿ ಮಾಡಿ ಮೂರು ತಿಂಗಳೊಳಗೆ ಹಕ್ಕುಪತ್ರ ಕೊಡಲು ತೀರ್ಮಾನಿಸಲಾಗಿದೆ ಎಂದಿದ್ದಾರೆ.