ಬೆಂಗಳೂರು :ರಾಜ್ಯ ಸರ್ಕಾರಿ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಲೋಕಾಯುಕ್ತದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಸಚಿವ ಬೋಸ್ ರಾಜ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸದಸ್ಯ ಗೋವಿಂದ್ ರಾಜ್ ಪ್ರಶ್ನೆಗೆ ಉತ್ತರಿಸಿದ ಅವರು, ಶೀಘ್ರದಲ್ಲೇ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿ ಇರುವ 556 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುತ್ತದೆ. ಲೋಕಾಯುಕ್ತದಲ್ಲಿ ಒಟ್ಟು 1146 ಹುದ್ದೆಗಳಿವೆ. ಇದರಲ್ಲಿ 556 ಹುದ್ದೆಗಳು ಖಾಲಿಯಿವೆ. ಹಂತ ಹಂತವಾಗಿ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಸಿದ್ದತೆ ನಡೆಸಿದೆ, ಶೀಘ್ರದಲ್ಲೇ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ ಎಂದರು.
ಎಸಿಬಿ ಮುಚ್ಚಿಹೋಗಿರುವುದರಿಂದ ಅಲ್ಲಿ ಕೆಲಸ ಮಾಡುತ್ತಿದ್ದ ಅಧಿಕಾರಿಗಳನ್ನು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಲಾಗುತ್ತದೆ ಎಂದು ಸಚಿವ ಬೋಸ್ ರಾಜ್ ಹೇಳಿದರು.
‘ಕೊಳೆತ ಮೊಟ್ಟೆ’ ವಿತರಣೆ ಮಾಡಿದವರ ವಿರುದ್ಧ ಕಠಿಣ ಕ್ರಮ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು : ಕೊಳೆತ ಮೊಟ್ಟೆ ವಿತರಣೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು ಅಂಗನವಾಡಿ ಕೇಂದ್ರಗಳಿಗೆ ಮೊಟ್ಟೆ ಪೂರೈಕೆ ಮಾಡಿದವರನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ. ಇಂತಹವುದಕ್ಕೆಲ್ಲಾ ಕಡಿವಾಣ ಹಾಕುತ್ತೇವೆ. ಕೊಳೆತ ಮೊಟ್ಟೆ ವಿತರಣೆ ಮಾಡಿದವರ ವಿರುದ್ಧ ಕ್ರಮ ಕೈಗೊಂಡು ಅವರನ್ನು ಬ್ಲಾಕ್ ಲಿಸ್ಟ್ ಗೆ ಸೇರಿಸಲಾಗುತ್ತದೆ. ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಂಗನವಾಡಿಗಳಿಗೆ ಪೂರೈಕೆ ಮಾಡಲಾಗುತ್ತಿರುವ ಮೊಟ್ಟೆಗಳ ಬಗ್ಗೆ ಆಕ್ಷೇಪ ವ್ಯಕ್ತವಾಗುತ್ತಿದ್ದು, ಕೊಳೆತ ಮೊಟ್ಟೆ ಪೂರೈಕೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.ಹಾಸನ ಜಿಲ್ಲೆಯ ಬಳಿಕ ಇದೀಗ ಹಾವೇರಿ, ಕೊಡಗು ಜಿಲ್ಲೆಗಳ ಹಲವು ಅಂಗನವಾಡಿಗಳಿಗೆ ಕೊಳೆತ ಮೊಟ್ಟೆ ಪೂರೈಕೆ ಮಾಡಲಾಗಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳ ಬೇಜವಾಬ್ದಾರಿಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಾಸನ ಜಿಲ್ಲೆಯ ಹೊಳೆನರಸಿಪುರದಲ್ಲಿ ವಾರದಲ್ಲಿ ಎರಡು ಪ್ರಕರಣ ಪತ್ತೆಯಾಗಿದೆ. ಇದೀಗ ಹಾವೇರಿ ಜಿಲ್ಲೆಯ ಹಲವು ಅಂಗನವಡಿಗಳಲ್ಲಿಯೂ ಕಳಪೆ ಗುಣಮಟ್ಟದ ಮೊಟ್ಟೆ ಪೂರೈಕೆಯಾಗಿರುವುದು ಕಂಡುಬಂದಿದೆ. ಅಂಗನವಾಡಿ ಮಕ್ಕಳಿಗೆ, ಗರ್ಭಿಣಿಯರಿಗೆ ನೀಡಲಾಗುತ್ತಿರುವ ಮೊಟ್ಟೆಗಳಲ್ಲಿಯೂ ಅಧಿಕಾರಿಗಳು ಕಳ್ಳಾಟ ನಡೆಸಿದ್ದಾರೆ ಎಂದು ಜನರು ಕಿಡಿಕಾರಿದ್ದಾರೆ.