ಬೆಂಗಳೂರು : ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ವರ್ಗಾವಣೆಗೊಂಡಿರುವ ಎಲ್ಲ ಶಿಕ್ಷಕರನ್ನು ಕೂಡಲೇ ಬಿಡುಗಡೆ ಮಾಡಲು ಎಲ್ಲಾ ಜಿಲ್ಲಾ ಉಪನಿರ್ದೇಶಕರು ಮತ್ತು ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದೆ.
ರಾಜ್ಯದ ಸರ್ಕಾರಿ ಪ್ರಾಥಮಿಕ/ಪ್ರೌಢ ಶಾಲೆಗಳಲ್ಲಿ ವರ್ಗಾವಣೆಯಿಂದ ಖಾಲಿ ಇರುವ ಹುದ್ದೆಗಳಿಗೆ ಎದುರಾಗಿ ಉಲ್ಲೇಖ-1 ರ ಸರ್ಕಾರದ ಆದೇಶದಂತೆ ಒಟ್ಟು 43000 ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಸರ್ಕಾರ ಅವಕಾಶ ಕಲ್ಪಿಸಿದೆ. ಅದರಂತ ಉಲ್ಲೇಖ-2 ಮತ್ತು 3 ರಲ್ಲಿ ಜಿಲ್ಲಾವಾರು ಅತಿಥಿ ಶಿಕ್ಷಕರ ಹುದ್ದೆಗಳನ್ನು ಹಂಚಿಕೆ ಮಾಡಿ ಸೂಚನೆಗಳನ್ನು ನೀಡಲಾಗಿರುತ್ತದೆ.
ಪುಸ್ತುತ ಉಲ್ಲೇಖ 04 & 05 ರಲ್ಲಿನ ಸೂಚನೆಯಂತೆ ಸರ್ಕಾರಿ ಪ್ರಾಥಮಿಕ /ಪ್ರೌಢ ಶಾಲಾ ಶಿಕ್ಷಕರ ವರ್ಗಾವಣೆಯಿಂದ ತೆರವಾದ ಶಿಕ್ಷಕರ ಖಾಲಿ ಹುದ್ದೆಗೆ ತಕ್ಷಣ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಂಡು, ಕೂಡಲೇ ಕೌನ್ಸಿಲಿಂಗ್ ಮೂಲಕ ವರ್ಗಾವಣೆಗೊಂಡ ಶಿಕ್ಷಕರನ್ನು ಕರ್ತವ್ಯದಿಂದ ಬಿಡುಗಡೆ ಮಾಡಲು ಸೂಚಿಸಿದ. ಈ ಸಂಬಂಧ ಯಾವುದೇ ದೂರುಗಳು ಸ್ವೀಕೃತವಾದಲ್ಲಿ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಹೇಳಿದೆ.