ನವದೆಹಲಿ: ಟ್ರಕ್ ಮತ್ತು ಟ್ಯಾಕ್ಸಿ ಚಾಲಕರಿಗಾಗಿ ಕೇಂದ್ರ ಸರ್ಕಾರವು ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳಲ್ಲಿ ‘ಹೊಸ ಸೌಲಭ್ಯಗಳೊಂದಿಗೆ ಆಧುನಿಕ ಕಟ್ಟಡಗಳನ್ನು’ ಅಭಿವೃದ್ಧಿಪಡಿಸಲಿದೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಈ ಘೋಷಣೆ ಮಾಡಿದ್ದಾರೆ.
ದೆಹಲಿಯಲ್ಲಿ ನಡೆದ ಇಂಡಿಯಾ ಮೊಬಿಲಿಟಿ ಗ್ಲೋಬಲ್ ಎಕ್ಸ್ ಪೋ 2024 ರಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಲಕ್ಷಾಂತರ ಟ್ರಕ್ ಮತ್ತು ಟ್ಯಾಕ್ಸಿ ಚಾಲಕರು ನಮ್ಮ ಸಾಮಾಜಿಕ ಮತ್ತು ಆರ್ಥಿಕ ವ್ಯವಸ್ಥೆಯ ಅವಿಭಾಜ್ಯ ಅಂಗವಾಗಿದೆ. ಆಗಾಗ್ಗೆ, ಅವರು ಅನೇಕ ಗಂಟೆಗಳ ಕಾಲ ಕೆಲಸ ಮಾಡುತ್ತಾರೆ … ಅವರಿಗೆ ವಿಶ್ರಾಂತಿ ಪಡೆಯಲು ಸಮಯವಿಲ್ಲ, ಆದ್ದರಿಂದ, ರಸ್ತೆ ಅಪಘಾತಗಳಿಗೆ ಬಲಿಯಾಗುತ್ತಾರೆ ಹೀಗಾಗಿ ಹೆದ್ದಾರಿಗಳ ಉದ್ದಕ್ಕೂ 1,000 ಆಧುನಿಕ ವಿಶ್ರಾಂತಿ ಗೃಹಗಳ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ದೀರ್ಘ ಪ್ರಯಾಣದ ಸಮಯದಲ್ಲಿ ಚಾಲಕರಿಗೆ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಆಹಾರ, ನೀರು, ವಾಶ್ ರೂಮ್ ಗಳು, ಪಾರ್ಕಿಂಗ್, ಶೌಚಾಲಯಗಳು ಮುಂತಾದ ಸೌಲಭ್ಯಗಳೊಂದಿಗೆ ಆಧುನಿಕ ಕಟ್ಟಡಗಳನ್ನು ನಿರ್ಮಿಸಲಾಗುವುದು. ಯೋಜನೆಯ ಮೊದಲ ಹಂತದಲ್ಲಿ ದೇಶದ ಉದ್ದಗಲಕ್ಕೂ ಇಂತಹ 1000 ಕಟ್ಟಡಗಳನ್ನು ನಿರ್ಮಿಸಲಾಗುವುದು ಎಂದು ಪ್ರಧಾನಿ ಹೇಳಿದರು.