ಬಾಗಲಕೋಟೆ : ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಶೀಘ್ರವೇ ‘KSRTC’ ಯಲ್ಲಿ ಖಾಲಿ ಇರುವ 13,000 ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ KSRTC’ ಯಲ್ಲಿ ಖಾಲಿ ಇರುವ ಕಂಡಕ್ಟರ್, ಡ್ರೈವರ್ ಮತ್ತು ಮೆಕ್ಯಾನಿಕ್ ಮೊದಲಾದ ಹುದ್ದೆಗಳಿಗೆ 13,000 ಜನರನ್ನು ಭರ್ತಿ ಮಾಡಿಕೊಳ್ಳುವ ಪ್ರಕ್ರಿಯೆ ಆರಂಭಿಸಲಾಗುವುದು, ಪ್ರಸ್ತಾವನೆಯನ್ನು ಸರ್ಕಾರದ ಅನುಮೋದನೆಗಾಗಿ ಕಳಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
ಶಕ್ತಿ ಯೋಜನೆಗೆ ರಾಜ್ಯಾದ್ಯಂತ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, ಇದುವರೆಗೆ 46 ಕೋಟಿ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು. ‘ಐದು ಗ್ಯಾರಂಟಿಗಳಲ್ಲಿ ನಾಲ್ಕು ಜಾರಿ ಮಾಡಿದ್ದೇವೆ. ಶಕ್ತಿ ಯೋಜನೆ ಅಡಿಯಲ್ಲಿ 46 ಕೋಟಿ ಜನ ಮಹಿಳಾ ಪ್ರಯಾಣಿಕರು ಪ್ರಯಾಣ ಮಾಡಿದ್ದಾರೆ ಎಂದರು.
ಮೊದಲು ಹೆಚ್ಚು ಮಹಿಳೆಯರೇ ಪ್ರಯಾಣ ಮಾಡಿದ್ದರಿಂದ ಸ್ವಲ್ಪ ಸಮಸ್ಯೆ ಆಗಿತ್ತು. ನಂತರ ಎಲ್ಲವೂ ಸುಧಾರಣೆ ಆಗಿದೆ. ರಾಜ್ಯದಲ್ಲಿ ನಾಲ್ಕು ವಿಭಾಗಗಳು ಸೇರಿ ಪ್ರತಿದಿನ 1.54 ಲಕ್ಷ ಟ್ರಿಪ್ ಇರುತ್ತೆ. ಇದುವರೆಗೆ 46 ಕೋಟಿ ಮಹಿಳೆಯರು ಉಚಿತ ಬಸ್ ಪ್ರಯಾಣ ಮಾಡಿದ್ದಾರೆ, ರಾಜ್ಯದಲ್ಲಿ ಶಕ್ತಿ ಯೋಜನೆ ಯಶಸ್ವಿಯಾಗಿದೆ ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.