alex Certify ನಿರುದ್ಯೋಗಿ ಯುವತಿಯರಿಗೆ ಗುಡ್ ನ್ಯೂಸ್ : ಎಂಬ್ರಾಯ್ಡರಿ & ಆರಿ ವರ್ಕ್ ಉಚಿತ ತರಬೇತಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿರುದ್ಯೋಗಿ ಯುವತಿಯರಿಗೆ ಗುಡ್ ನ್ಯೂಸ್ : ಎಂಬ್ರಾಯ್ಡರಿ & ಆರಿ ವರ್ಕ್ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಎಂಬ್ರಾಯ್ಡರಿ, ಆರಿ ವರ್ಕ್ & ಫ್ಯಾಬ್ರಿಕ್ ಪೇಟಿಂಗ್ ಕುರಿತ 30 ದಿನಗಳ ಉಚಿತ ತರಬೇತಿಯು ನವೆಂಬರ್ 05 ರಿಂದ ಆರಂಭವಾಗಲಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿಬೇಕು, ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸಲು ಅಕ್ಟೋಬರ್ 08 ಕೊನೆಯ ದಿನವಾಗಿದೆ.

ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ: 9740982585, 9380162042 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...