![](https://kannadadunia.com/wp-content/uploads/2023/12/udyoga-mela.jpg)
ಬೆಂಗಳೂರು : ರಾಜ್ಯ ಸರ್ಕಾರವು ನಿರುದ್ಯೋಗಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಜನವರಿ ಕೊನೆ ವಾರದಲ್ಲಿ ರಾಜ್ಯ ಮಟ್ಟದ ಉದ್ಯೋಗ ಮೇಳವನ್ನು ಆಯೋಜಿಸಲು ತೀರ್ಮಾನಿಸಿದೆ.
ಯುವಜನತೆ ವಿದ್ಯಾರ್ಹತೆ ತಕ್ಕಂತೆ ಉತ್ತಮ ಉದ್ಯೋಗ ಕಂಡುಕೊಳ್ಳುವ ಸಲುವಾಗಿ ಆದ್ಯತೆ ನೀಡಲಾಗುತ್ತಿದ್ದು, ರಾಜ್ಯ ಮಟ್ಟದ ಉದ್ಯೋಗ ಮೇಳವನ್ನು ಯಶಸ್ವಿಯಾಗಿ ಆಯೋಜನೆ ಮಾಡಲು ಸಚಿವರನ್ನು ಒಳಗೊಂಡ ಸಮಿತಿ ರಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.
ಈ ಕುರಿತು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದು, ಜನವರಿ ಕೊನೆಯ ವಾರದಲ್ಲಿ ಬೆಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲು ಉದ್ದೇಶಿಸಿದ್ದೇವೆ.ಸಚಿವರಾದ ಎಂ.ಬಿ.ಪಾಟೀಲ, ಪ್ರಿಯಾಂಕ್ ಖರ್ಗೆ, ಡಾ. ಶರಣಪ್ರಕಾಶ ಪಾಟೀಲ, ಡಾ. ಎಂ.ಸಿ. ಸುಧಾಕರ್, ಬಿ. ನಾಗೇಂದ್ರ, ಸಂತೋಷ್ ಲಾಡ್ ಹಾಗೂ ದಿನೇಶ್ ಗುಂಡೂರಾವ್ ಅವರನ್ನೊಳಗೊಂಡ ಸಚಿವರ ತಂಡ ರಚಿಸಲು ಸೂಚಿಸಲಾಗಿದ್ದು, ಉದ್ಯೋಗ ಮೇಳವನ್ನು ವ್ಯವಸ್ಥಿತವಾಗಿ ಆಯೋಜಿಸುವುದು ಸಮಿತಿಯ ಪ್ರಮುಖ ಕಾರ್ಯವಾಗಿರಲಿದೆ ಎಂದು ತಿಳಿಸಿದ್ದಾರೆ.
ಸಚಿವರ ತಂಡವು ಉದ್ಯೋಗದಾತ ಕಂಪನಿಯವರೊಂದಿಗೆ ಸಭೆ ನಡೆಸಿ ಚರ್ಚಿಸಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕ್ರಮವಹಿಸಲಿದೆ. ಜೊತೆಗೆ ಕೈಗಾರಿಕೆಗಳೊಂದಿಗೆ ಚರ್ಚಿಸಿ, ಉದ್ಯೋಗಾಕಾಂಕ್ಷಿಗಳ ಕೌಶಲ್ಯ ಹಾಗೂ ಕೈಗಾರಿಕೆಗಳ ಅಗತ್ಯತೆಯ ನಡುವಿನ ಅಂತರ ಸರಿಪಡಿಸುವ ಬಗ್ಗೆ ದೂರಗಾಮಿ ಕಾರ್ಯಕ್ರಮಗಳನ್ನು ರೂಪಿಸುವ ಬಗ್ಗೆ ಶಿಫಾರಸ್ಸು ಮಾಡುವಂತೆ ಮತ್ತು ವಿದೇಶದಲ್ಲಿರುವ ಉದ್ಯೋಗಾವಕಾಶಗಳ ಕುರಿತು ಪರಿಶೀಲನೆ ನಡೆಸಲಿದೆ ಎಂದು ಹೇಳಿದ್ದಾರೆ.
ಸಮಿತಿಯ ಇತರ ಕರ್ತವ್ಯಗಳು:
ಸಚಿವರ ತಂಡವು ಉದ್ಯೋಗದಾತ ಕಂಪನಿಯವರೊಂದಿಗೆ ಸಭೆ ನಡೆಸಿ ಚರ್ಚಿಸಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕ್ರಮವಹಿಸಲಿದೆ. ಜೊತೆಗೆ ಕೈಗಾರಿಕೆಗಳೊಂದಿಗೆ ಚರ್ಚಿಸಿ, ಉದ್ಯೋಗಾಕಾಂಕ್ಷಿಗಳ ಕೌಶಲ್ಯ ಹಾಗೂ ಕೈಗಾರಿಕೆಗಳ ಅಗತ್ಯತೆಯ ನಡುವಿನ ಅಂತರ ಸರಿಪಡಿಸುವ ಬಗ್ಗೆ ದೂರಗಾಮಿ ಕಾರ್ಯಕ್ರಮಗಳನ್ನು ರೂಪಿಸುವ ಬಗ್ಗೆ ಶಿಫಾರಸ್ಸು ಮಾಡುವಂತೆ ಮತ್ತು ವಿದೇಶದಲ್ಲಿರುವ ಉದ್ಯೋಗಾವಕಾಶಗಳ ಕುರಿತು ಪರಿಶೀಲನೆ ನಡೆಸಲಿದೆ.