ಬೆಂಗಳೂರು : ರಾಜ್ಯದಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ ಅವಕಾಶಗಳನ್ನು ಒದಗಿಸುವ ಸಲುವಾಗಿ ಫೆಬ್ರವರಿ ತಿಂಗಳಿನಲ್ಲಿ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗುತ್ತಿದೆ.
ಉದ್ಯೋಗ ಮೇಳದ ಪೂರ್ವ ಸಿದ್ಧತೆ ಕುರಿತು ಇಂದು ವಿಧಾನಸೌಧದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಶರಣಪ್ರಕಾಶ ಪಾಟೀಲ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಲಾಗಿದೆ.
ಸಭೆಯಲ್ಲಿ ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ್ ಉನ್ನತ ಶಿಕ್ಷಣ ಸಚಿವರಾದ ಎಂ.ಸಿ. ಸುಧಾಕರ್ , ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಬಿ. ನಾಗೇಂದ್ರ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.