alex Certify ನಿರುದ್ಯೋಗಿ ಯುವಕ, ಯುವತಿಯರಿಗೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿರುದ್ಯೋಗಿ ಯುವಕ, ಯುವತಿಯರಿಗೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃಧ್ಧಿ ನಿಗಮದಿಂದ 2023-24ನೇ ಸಾಲಿಗೆ ವಿವಿಧ ಯೋಜನೆಗಳಡಿ ಸಹಾಯಧನ ಮತ್ತು ಸಾಲ ಸೌಲಭ್ಯ ಒದಗಿಸಲು ಪರಿಶಿಷ್ಟ ಪಂಗಡ ಸಾಮಾನ್ಯ ನಿರುದ್ಯೋಗಿ ಯುವಕ, ಯವತಿಯರಿಂದ ಅರ್ಜಿ ಅಹ್ವಾನಿಸಲಾಗಿದೆ.

ಸೇವಾ ಸಿಂಧು ಪೋರ್ಟಲ್ ವಿಳಾಸ https://sevasindhu.karnataka.gov.in  ನಲ್ಲಿ ಅರ್ಜಿಗಳು ಲಭ್ಯವಿರುತ್ತವೆ.  ಆಸಕ್ತರು ಗ್ರಾಮಒನ್,  ಹುಬ್ಬಳ್ಳಿ ಧಾರವಾಡ ಒನ್ ಅಥವಾ ಕರ್ನಾಟಕ ಒನ್ ಕೇಂದ್ರಗಳಲ್ಲಿ ಮಾತ್ರ ಆನ್‍ಲೈನ್ ಮೂಲಕ ನವೆಂಬರ್ 29, 2023 ಒಳಗಾಗಿ  ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಕಲ್ಯಾಣ ಮಿತ್ರ ಸಹಾಯವಾಣಿ ಸಂಖ್ಯೆ: 9482-300-400 ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃಧ್ಧಿ ನಿಗಮ, ಪ್ಲಾಟ ನಂ.4,  ಸತ್ತೂರ ಕಾಲನಿ,  1ನೇ ಕ್ರಾಸ,  ವಿದ್ಯಾಗಿರಿ, ಧಾರವಾಡ–580004 ಹಾಗೂ ದೂ.ಸಂ:0836-2460855  ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...