alex Certify ರಾಜ್ಯದ ನಿರುದ್ಯೋಗಿ ಯುವಕ-ಯುವತಿಯರಿಗೆ ಗುಡ್ ನ್ಯೂಸ್ : ಉದ್ಯಮಶೀಲತಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ನಿರುದ್ಯೋಗಿ ಯುವಕ-ಯುವತಿಯರಿಗೆ ಗುಡ್ ನ್ಯೂಸ್ : ಉದ್ಯಮಶೀಲತಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಮತ್ತು ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ಕೊಪ್ಪಳ ಇವರ ವತಿಯಿಂದ ಸ್ವಯಂ ಉದ್ಯೋಗ ಪ್ರಾರಂಭಿಸುವ ನಿರುದ್ಯೋಗ ಯುವಕ ಯುವತಿಯರಿಗೆ ಮತ್ತು ಉದ್ಯಮ ಆಕಾಂಕ್ಷಿಗಳಿಗೆ ಹತ್ತು ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ತರಬೇತಿಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗದ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ, ಹಾಗೂ ಉದ್ಯಮ ನಿರ್ವಹಣೆ, ಉದ್ಯಮಶೀಲತೆ, ಉದ್ಯಮ ಪ್ರಾರಂಭದ ಹಂತಗಳು, ಉದ್ಯಮಗಳನ್ನು ಪ್ರಾರಂಭಿಸಲು ಸರ್ಕಾರದ ಯೋಜನೆಗಳು, ಸಾಲ ಸೌಲಭ್ಯಗಳು, ಬ್ಯಾಂಕ್ ಬಗ್ಗೆ, eಹೀರಾತು ಮತ್ತು ಮಾರುಕಟ್ಟೆಯ ಕುರಿತು ನೋಂದಣಿ ಮಾಡುವ ವಿಧಾನಗಳು, ಯಶಸ್ವಿ ಉದ್ಯಮಿಗಳ ಜೊತೆ ಸಂವಾದ, ಉದ್ಯಮ ನಿರ್ವಹಣೆ ಮಾಡುವ ವಿಧಾನಗಳು ಮತ್ತು ಇತ್ಯಾದಿ ವಿಷಯಗಳ ಕುರಿತು ತರಬೇತಿಯನ್ನು ನೀಡಲಾಗುತ್ತಿದ್ದು, ಕೊಪ್ಪಳ ಜಿಲ್ಲೆಯ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಸಬಹುದಾಗಿದೆ.

ಅಭ್ಯರ್ಥಿಗಳು 18 ವರ್ಷ ದಿಂದ 45 ವರ್ಷ ವಯಸ್ಸಿನವರಾಗಿರಬೇಕು ಹಾಗೂ ಎಸ್.ಎಸ್.ಎಲ್.ಸಿ ಪೂರ್ಣಗೊಂಡಿರಬೇಕು. ಎಲ್ಲಾ ವರ್ಗದ ಆಸಕ್ತರು  ಅರ್ಜಿಯನ್ನು ಜಂಟಿ ನಿರ್ದೇಶಕರು, ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರ ಕಚೇರಿ ಕೊಪ್ಪಳ ಆವರಣ, ನಗರಸಭೆ ಎದುರುಗಡೆ, ಕೊಪ್ಪಳ ಇಲ್ಲಿಗೆ ತಮ್ಮ ಆಧಾರ ಕಾರ್ಡ್, ಜಾತಿ ಪ್ರಮಾಣ ಪತ್ರ, ರೇಶನ್ ಕಾರ್ಡ್ಗಳ ಜೆರಾಕ್ಸ ಪ್ರತಿಗಳು, 2 ಪಾಸ್‌ಪೋರ್ಟ್ ಫೋಟೋಗಳೊಂದಿಗೆ ಜನವರಿ 29ರ ಒಳಗಾಗಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 6362557332 ಮತ್ತು 6362681190 ಗೆ ಸಂಪರ್ಕಿಸಬಹುದು ಎಂದು ಕೊಪ್ಪಳ ಸಿಡಾಕ್ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...