ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸ್ತಕ ಸಾಲಿಗೆ ವಿವಿಧ ಯೋಜನೆಗಳಡಿ ಸಹಾಯಧನ, ಸಾಲ-ಸೌಲಭ್ಯ ಪಡೆಯಲು ಅರ್ಹರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಅರ್ಜಿ ಸಲ್ಲಿಸಲು ಸೆ.16 ಕೊನೆಯ ದಿನವಾಗಿದ್ದು, (ಅರಿವು ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನ ಇರುವುದಿಲ್ಲ)
ಅರ್ಹತೆ
ಉಪ್ಪಾರ ಸಮುದಾಯ ಹಾಗೂ ಅದರ ಉಪಜಾತಿಗಳಿಗೆ ಸೇರಿರಬೇಕು. ಚಾಲ್ತಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯ. ನಿಗಮದ ಅಥವಾ ಸರ್ಕಾರದ ಯಾವುದಾದರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು. ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು.
ಅರಿವು ಯೋಜನೆಯಡಿ ಅಭ್ಯರ್ಥಿಯ ವಯೋಮಿತಿ 18 ವರ್ಷಗಳಿಂದ 30 ವರ್ಷಗಳ ಮಿತಿಯಲ್ಲಿರಬೇಕು. ವಾರ್ಷಿಕ ವರಮಾನ ರೂ.3.50 ಲಕ್ಷ. ಸ್ವಾವಲಂಬಿ ಸಾರಥಿ ಯೋಜನೆಯಡಿ ವಯೋಮಿತಿ 21 ವರ್ಷಗಳಿಂದ 45 ವರ್ಷಗಳ ಮಿತಿಯಲ್ಲಿರಬೇಕು. ಅರ್ಜಿದಾರರು ತಮ್ಮ ಮೊಬೈಲ್ ಸಂಖ್ಯೆಯನ್ನು ಹಾಗೂ ಬ್ಯಾಂಕ್ ಖಾತೆಯನ್ನು ತಮ್ಮ ಆಧಾರ್ ಸಂಖ್ಯೆಗೆ ಜೋಡಣೆ ಮಾಡಿರಬೇಕು.ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33, ವಿಕಲಚೇತನರಿಗೆ ಶೇ.5, ತೃತೀಯ ಲಿಂಗಿಗಳಿಗೆ ಶೇ.1 ಮೀಸಲಾತಿ ಇರಿಸಿದೆ.
ಯೋಜನೆಗಳ ವಿವರ:
ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ (ಬ್ಯಾಂಕ್ಗಳ ಸಹಯೋಗದೊಂದಿಗೆ), ಅರಿವು ಶೈಕ್ಷಣಿಕ ಸಾಲ ಯೋಜನೆ(ನೂತನ), ಅರಿವು ಶೈಕ್ಷಣಿಕಸಾಲ ಯೋಜನೆ (ನವೀಕರಣ), ವಿದೇಶಿ ವ್ಯಾಸಂಗ ಯೋಜನೆಯಡಿ ವಾರ್ಷಿಕ ವರಮಾನವು ರೂ.8 ಲಕ್ಷ ಮಿತಿಯಲ್ಲಿರಬೇಕು. ಗಂಗಾ ಕಲ್ಯಾಣ ನೀರಾವರಿ ಯೋಜನೆ. ಸ್ವಾವಲಂಬಿ ಸಾರಥಿಯೋಜನೆ.ಅರ್ಜಿಗಳನ್ನು ಬೆಂಗಳೂರು-ಒನ್, ಕರ್ನಾಟಕ-ಒನ್, ಅಟಲ್-ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರಿಕ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಸೇವಾಸಿಂಧು ಪೋರ್ಟಲ್ನಡಿ ಸಲ್ಲಿಸಬೇಕು.
2023-24ನೇ ಸಾಲಿನ ಯೋಜನೆಗೆ ಅರ್ಜಿ ಸಲ್ಲಿಸಿರುವ ಅರ್ಜಿದಾರರು ಮತ್ತೊಮ್ಮೆ ಬೇರೆ ಯೋಜನೆಗಳಿಗೆ ಅರ್ಜಿಸಲ್ಲಿಸುವ ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ) ಜಿಲ್ಲಾ ವ್ಯವಸ್ಥಾಪಕಕ ಕಚೇರಿ ಅಥವಾ ದೂ.08392-267038 ಗೆ ಸಂಪರ್ಕಿಸಬಹುದು.