ವೀರಶೈವ ಲಿಂಗಾಯತ ಸಮುದಾಯ ಹಾಗೂ ಉಪಜಾತಿಗೆ ಸೇರಿದ ಜನರ (ಪ್ರವರ್ಗ-3ಬಿ) ಅಭಿವೃದ್ಧಿಗಾಗಿ 2023-24 ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಲ್ಲಿ ಸೌಲಭ್ಯ ಪಡೆಯ ಬಯಸುವವರಿಂದ ಆನ್ಲೈನ್ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಅಕ್ಟೋಬರ್, 30 ಕೊನೆಯ ದಿನವಾಗಿದೆ(ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ). ಶೈಕ್ಷಣಿಕ ಸಾಲ ಯೋಜನೆಗಳು: ಬಸವ ಬೆಳಗು ಯೋಜನೆ ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದ್ದು, ಅವರ ಕುಟುಂಬ ವಾರ್ಷಿಕ ಆದಾಯ ರೂ. 3.50 ಲಕ್ಷಗಳ ಮಿತಿಯಲ್ಲಿರುವ ವಿದ್ಯಾರ್ಥಿಗಳ ವೃತ್ತಿ ಪರ ಕೋರ್ಸ್ಗಳಾದ ಇಂಜಿನಿಯರಿಂಗ್, ವೈದ್ಯಕೀಯ, ದಂತ ವೈದ್ಯಕೀಯ ಮುಂತಾದ 28 ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತದ್ದಲ್ಲಿ ವಾರ್ಷಿಕ ರೂ. 1 ಲಕ್ಷಗಳಂತೆ ಕೋರ್ಸ್ ಅವಧಿಗೆ ಗರಿಷ್ಠ ರೂ. 4 ಲಕ್ಷಗಳಿಂದ ರೂ. 5 ಲಕ್ಷಗಳವರೆಗೆ ವಾರ್ಷಿಕ ಶೇ: 2ರ ಬಡ್ಡಿ ದರದಲ್ಲಿ ಸಾಲ ಮಂಜೂರು ಮಾಡಲಾಗುವುದು. ವಿದ್ಯಾರ್ಥಿಗಳು ಸಿಇಟಿ/ ನೀಟ್ನಲ್ಲಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಸರ್ಕಾರಿ ಕೋಟಾದ ಸೀಟು ಪಡೆದಿರಬೇಕು.
ಬಸವ ಬೆಳಗು ಯೋಜನೆ: 2022-23 ನೇ ಸಾಲಿನಲ್ಲಿ ಸಾಲ ಪಡೆದ ವಿದ್ಯಾರ್ಥಿಗಳಿಗೆ 2ನೇ ಕಂತಿನ ನವೀಕರಣ ಸಾಲ ಮಂಜೂರು ಮಾಡಲು ವ್ಯಾಸಂಗ ದೃಢೀಕರಣ ಮತ್ತು ಹಿಂದಿನ ವರ್ಷದ ಅಂಕಪಟ್ಟಿಯೊಂದಿಗೆ ಅರ್ಜಿ ಸಲ್ಲಿಸುವುದು.
ವಿದೇಶ ವಿದ್ಯಾ ವಿಕಾಸ ಯೋಜನೆಯಡಿ ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದ್ದು, ಅವರ ಕುಟುಂಬ ವಾರ್ಷಿಕ ಆದಾಯ ರೂ. 8 ಲಕ್ಷಗಳ ಮಿತಿಯಲ್ಲಿರುವ ವಿದ್ಯಾರ್ಥಿಗಳು ಕಿS Woಡಿಟಜ ಖಚಿಟಿಞiಟಿg 500 ರೊಳಗೆ ಬರುವ ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಪೋಸ್ಟ್ ಡಾಕ್ಟ್ರಲ್, ಪಿ.ಹೆಚ್.ಡಿ. ಮಾಸ್ಟರ್ ಡಿಗ್ರಿ ಕೋರ್ಸ್ಗಳಲ್ಲಿ ಉನ್ನತ ವ್ಯಾಸಂಗ ಪಡೆಯಲು ವಾರ್ಷಿಕ ಗರಿಷ್ಠ ರೂ. 10 ಲಕ್ಷಗಳಂತೆ 3 ವರ್ಷದ ಅವಧಿಗೆ ಒಟ್ಟು ರೂ. 20 ಲಕ್ಷಗಳನ್ನು ಶೂನ್ಯ ಬಡ್ಡಿ ದರದಲ್ಲಿ ಸಾಲ ಮಂಜೂರು ಮಾಡಲಾಗುವುದು.
ವಿದೇಶ ವಿದ್ಯಾವಿಕಾಸ ಯೋಜನೆಯಡಿ 2022-23 ನೇ ಸಾಲಿನಲ್ಲಿ ಸಾಲ ಪಡೆದ ವಿದ್ಯಾರ್ಥಿಗಳಿಗೆ 2ನೇ ಕಂತಿನ ನವೀಕರಣ ಸಾಲ ಮಂಜೂರು ಮಾಡಲು ವ್ಯಾಸಂಗ ದೃಢೀಕರಣ ಮತ್ತು ಹಿಂದುನ ವರ್ಷದ ಅಂಕಟ್ಟಿಯೊಂದಿಗೆ ಅರ್ಜಿ ಸಲ್ಲಿಸುವುದು.
ಜೀವ ಜಲ ಯೋಜನೆಯಡಿ ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದ್ದು, ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.98 ಸಾವಿರ ಹಾಗೂ ಪಟ್ಟಣ ಪ್ರದೇಶದವರಿಗೆ ರೂ. 1.20 ಲಕ್ಷಗಳ ಮಿತಿಯೊಳಗಿರುವ ಸಣ್ಣ ಮತ್ತು ಅತೀ ಸಣ್ಣ ರೈತರ ಜಮೀನುಗಳಿಗೆ ಕೊಳವೆ ಬಾವಿ ಕೊರೆಸುವ ಮುಖೇನ ನೀರಾವರಿ ಸೌಲಭ್ಯ ಒದಗಿಸಲಾಗುವುದು. ಕನಿಷ್ಠ 2 ಎಕರೆ ಹಾಗೂ ಗರಿಷ್ಠ 5 ಎಕರೆ ಒಳಗೆ ಜಮೀನು ಹೊಂದಿರಬೇಕು. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಸಣ್ಣ ಹಿಡುವಳಿದಾರರ ಪ್ರಮಾಣ ಪತ್ರ ಹೊಂದಿರಬೇಕು.
ಕಾಯಕ ಕಿರಣ ಯೋಜನೆಯಡಿ ವೀರಶೈವ ಲಿಂಗಾಯತ ಸಮುದಾಯದ ನಿರುದ್ಯೋಗಿಗಳು ಸ್ವಯಂ ಉದ್ಯೋಗ ಕೈಗೊಳ್ಳಲು ಆರ್ಥಿಕ ಚಟುವಟಿಕೆಗಳಿಗನುಸಾರ ಸಾಲ ಮತ್ತು ಸಹಾಯಧನ ಸೌಲಭ್ಯ ಒದಗಿಸಲಾಗುತ್ತದೆ. ಘಟಕ ವೆಚ್ಚ ರೂ.1 ಲಕ್ಷಗಳಿಗೆ ಶೇ.20ರಷ್ಟು ಗರಿಷ್ಠ ರೂ.20 ಸಾವಿರಗಳ ಸಹಾಯ ಧನವನ್ನು ಹಾಗೂ ಉಳಿಕೆ ಶೇ.80ರಷ್ಟು ಗರಿಷ್ಠ ರೂ.80 ಸಾವಿರಗಳನ್ನು ವಾರ್ಷಿಕ ಶೇ.4ರ ಬಡ್ಡಿ ದರದಲ್ಲಿ ಸಾಲ ಮಂಜೂರು ಮಾಡಲಾಗುತ್ತದೆ.
ಘಟಕ ವೆಚ್ಚ ರೂ.2 ಲಕ್ಷಗಳಿಗೆ ಶೇ.15ರಷ್ಟು ಗರಿಷ್ಠ ರೂ.30 ಸಾವಿರಗಳ ಸಹಾಯ ಧನವನ್ನು ಹಾಗೂ ಉಳಿಕೆ ಶೇ.85 ರಷ್ಟು ಗರಿಷ್ಠ ರೂ.1.70 ಲಕ್ಷಗಳನ್ನು ವಾರ್ಷಿಕ ಶೇ.4ರ ಬಡ್ಡಿ ದರದಲ್ಲಿ ಸಾಲ ಮಂಜೂರು ಮಾಡಲಾಗುತ್ತದೆ.
ಭೋಜನಾಲಯ ಕೇಂದ್ರ: ಸಮುದಾಯದ ಜನರು ಹೋಟೆಲ್ (ಖಾನಾವಳಿ) ಉದ್ಯಮ ಕೈಗೊಳ್ಳಲು ಈ ಯೋಜನೆಯಲ್ಲಿ ಸಾಲ ಮತ್ತು ಸಹಾಯಧನ ನೀಡಲಾಗುವುದು. ಹೋಟೆಲ್ ಉದ್ದಿಮೆ ಕೈಗೊಳ್ಳಲು ಘಟಕ ವೆಚ್ಚ ರೂ. 5 ಲಕ್ಷ ಇದರಲ್ಲಿ ರೂ.4.60 ಲಕ್ಷ ಸಾಲ ಮತ್ತು ರೂ. 40 ಸಾವಿರ ಸಹಾಯಧನ ನೆರವು ನೀಡಲಾಗುವುದು. ಫಲಾನುಭವಿಗಳು ತಮ್ಮ ಸ್ವಂತ ಹೆಸರಿನಲ್ಲಿ ಕನಿಷ್ಠ 20*30 ಅಳತೆಯುಳ್ಳ ನಿವೇಶನ ಹೊಂದಿರಬೇಕು.
ವಿಭೂತಿ ನಿರ್ಮಾಣ ಘಟಕ: ವೀರಶೈವ-ಲಿಂಗಾಯತ ಸಮುದಾಯದವರು ವಿಭೂತಿಯನ್ನು ತಯಾರಿಸುವವರಿಗೆ ಸಾಲ ಮತ್ತು ಸಹಾಯಧನ ನೀಡುವ ಯೋಜನೆ ಇದಾಗಿದೆ. ಕುಟುಂಬದ ವಾರ್ಷಿಕ ವರಮಾನ ರೂ.3.50 ಲಕ್ಷಗಳು ಮತ್ತು 18 ರಿಂದ 55 ವರ್ಷಗಳ ವಯೋಮಿತಿಯಲ್ಲಿರುವವರು ಅರ್ಜಿ ಸಲ್ಲಿಸಬಹುದು. ವಿಭೂತಿ ನಿರ್ಮಾಣ ಘಟಕ ನಿರ್ಮಿಸಲು ಘಟಕ ವೆಚ್ಚ ರೂ.4 ಲಕ್ಷ ಇದರಲ್ಲಿ ರೂ.3.60 ಲಕ್ಷ ಸಾಲ ಮತ್ತು ರೂ. 40 ಸಾವಿರ ಸಹಾಯಧನ ವಾರ್ಷಿಕ ಬಡ್ಡಿ ದರ ಶೇ.3 ದರದಲ್ಲಿ ನೆರವು ನೀಡಲಾಗುವುದು.
ಸ್ವಾವಲಂಭಿ ಸಾರಥಿ ಯೋಜನೆ: (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ: ನಿರುದ್ಯೋಗಿ ಚಾಲಕರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸ್ವಾವಲಂಭಿ ಸಾರಥಿ ಯೋಜನೆಯಡಿ ನಾಲ್ಕು ಚಕ್ರವಾಹನ (ಹಳದಿಬೊರ್ಡ್) ಖರೀದಿಗೆ ಪಡೆಯುವ ಸಾಲಕ್ಕೆ ಶೇ.50ರಷ್ಟು ಅಥವಾ ಗರಿಷ್ಠ 3 ಲಕ್ಷಗಳ ಸಹಾಯಧನವನ್ನು ನಿಗಮದಿಂದ ಮಂಜೂರು ಮಾಡಲಾಗುವುದು. ಉಳಿದ ಮೊತ್ತವನ್ನು ಬ್ಯಾಂಕ್/ ಹಣಕಾಸು ಸಂಸ್ಥೆಗಳ ಮೂಲಕ ಅವರು ವಿಧಿಸುವ ಚಾಲ್ತಿ ಬಡ್ಡಿ ದರದಲ್ಲಿ ಸಾಲ ಪಡೆಯುವುದು.
ಸ್ವಯಂ ಉದ್ಯೋಗ ಸಾಲ ಯೋಜನೆ: (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ) ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ ಕಲ್ಪಿಸಿಕೊಳ್ಳಲು ಅವರು ಕೈಗೊಳ್ಳುವ ಕೃಷಿ/ ಕೃಷಿ ಅವಲಂಭಿತ ಚಟುವಟಿಕೆಗಳು, ವ್ಯಾಪಾರ, ಸಾರಿಗೆ ಮತ್ತು ಯಂತ್ರೋಪಕರಣಗಳನ್ನು ಕೊಳ್ಳುವ ಆರ್ಥಿಕ ಚಟುವಟಿಕೆಗಳು/ ಉದ್ಯಮಗಳಿಗೆ ವಾಣಿಜ್ಯ ಬ್ಯಾಂಕುಗಳ ಮೂಲಕ ಸಾಲ ಪಡೆದಿದ್ದಲ್ಲಿ ನಿಗಮದಿಂದ ಶೇ.20 ರಷ್ಟು ಅಥವಾ ಗರಿಷ್ಟ ರೂ. 1 ಲಕ್ಷಗಳ ಸಹಾಯಧನ ಮಂಜೂರು ಮಾಡಲಾಗುತ್ತದೆ. ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿರಬೇಕು.
ನಿಗಮವು ಅನುಷ್ಟಾನಗೊಳಿಸುವ ಈ ಯೋಜನೆಗಳಲ್ಲಿ ಸರ್ಕಾರದ ವಿವೇಚನಾ ಕೋಟಾ ಮತ್ತು ನಿಗಮದ ಅಧ್ಯಕ್ಷರು/ ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಬಯಸುವವರೂ ಸಹ ಆನ್ಲೈನ್ನಲ್ಲಿ ಅರ್ಜಿಯನ್ನು ಸಲ್ಲಿಸುವುದು. ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಯಾವುದಾದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ.
ಅರ್ಹ ಫಲಾಪೇಕ್ಷಿಗಳು ಗ್ರಾಮ ಒನ್/ ಬೆಂಗಳೂರು ಒನ್/ ಕರ್ನಾಟಕ ಒನ್ ನಾಗರೀಕ ಸೇವಾ ಕೇಂದ್ರಗಳಲ್ಲಿ ದಾಖಲೆಗಳೊಂದಿಗೆ ಸೇವಾಸಿಂಧು ಪೆÇೀರ್ಟಲ್ನಲ್ಲಿ ಅರ್ಜಿ ಸಲ್ಲಿಸಬೇಕು. ಕಳೆದ ಮೂರು ವರ್ಷದಿಂದ ಸರ್ಕಾರದ ಯಾವುದೇ ನಿಗಮ/ ಇಲಾಖೆಗಳಲ್ಲಿ ಯೋಜನೆಯ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
ಹೆಚ್ಚಿನ ಮಾಹಿತಿಗೆ ನಿಗಮದ ಜಾಲತಾಣ https://kvldcl.karnataka.gov.in ಅಥವಾ ನಿಗಮದ ದೂರವಾಣಿ ಸಂಖ್ಯೆ 080-22865522/ 9900012351 ನ್ನು ಸಂಪರ್ಕಿಸುವುದು ಅಥವಾ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ(ನಿ), ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ಕಚೇರಿಯಲ್ಲಿ ಅಥವಾ ದೂರವಾಣಿ ಸಂಖ್ಯೆ: 08272221656 ಮೂಲಕ ಸಂಪರ್ಕಿಸಬಹುದು ಎಂದು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.