alex Certify ‘ವೀರಶೈವ ಲಿಂಗಾಯತ’ ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ವೀರಶೈವ ಲಿಂಗಾಯತ’ ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿಗೆ ವೀರಶೈವ-ಲಿಂಗಾಯತ ಜಾತಿ ಹಾಗೂ ಉಪಜಾತಿಗೆ ಸೇರಿದ ಸಮುದಾಯದವರಿಗೆ (ಪ್ರವರ್ಗ 3ಬಿ) ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಆಸಕ್ತ ಅರ್ಹ ಸಮುದಾಯದವರು ಆ.31ರೊಳಗಾಗಿ ಸೇವಾ ಸಿಂಧು ತಂತ್ರಾಂಶದ ಲಿಂಕ್ http://sevasindhu.karnataka.gov.in ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.

ಶೈಕ್ಷಣಿಕ ಸಾಲ ಯೋಜನೆಗಳು:

ಬಸವ ಬೆಳಗು ಯೋಜನೆ:
ವೀರಶೈವ-ಲಿಂಗಾಯತ ಸಮುದಾಯಕ್ಕೆ ಸೇರಿದ್ದು, ಅವರ ಕುಟುಂಬ ವಾರ್ಷಿಕ ಆದಾಯ ರೂ.3.50 ಲಕ್ಷ ಮಿತಿಯಲ್ಲಿರುವ ವಿದ್ಯಾರ್ಥಿಗಳು ಅರ್ಹರಾಗಿರುತ್ತಾರೆ.

ವೃತ್ತಿಪರ ಕೋರ್ಸ್ಗಳಾದ ಇಂಜಿನಿಯರಿಂಗ್, ವೈದ್ಯಕೀಯ, ದಂತ ವೈದ್ಯಕೀಯ ಮುಂತಾದ 28 ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿದ್ದಲ್ಲಿ ವಾರ್ಷಿಕ ರೂ.1 ಲಕ್ಷಗಳಂತೆ ಕೊರ್ಸ್ ನ ಅವಧಿಗೆ ಗರಿಷ್ಟ ರೂ.4 ಲಕ್ಷಗಳಿಂದ 5 ಲಕ್ಷಗಳವರೆಗೆ ವಾರ್ಷಿಕ ಶೇ.2 ರ ಬಡ್ಡಿದರದಲ್ಲಿ ಸಾಲ ಮಂಜೂರು ಮಾಡಲಾಗುವುದು.
ವಿದ್ಯಾರ್ಥಿಗಳು ಸಿಇಟಿ, ಎನ್ಇಇಟಿ ಇತ್ಯಾದಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಸರ್ಕಾರಿ ಕೋಟಾದ ಸೀಟು ಪಡೆದಿರಬೇಕು.

ಬಸವ ಬೆಳಗು ಯೋಜನೆ:
2022-23 ನೇ ಸಾಲಿನಲ್ಲಿ ಸಾಲ ಪಡೆದ ವಿದ್ಯಾರ್ಥಿಗಳಿಗೆ 3ನೇ ಕಂತಿನ ನವೀಕರಣ ಸಾಲ ಹಾಗೂ 2023-24 ನೇ ಸಾಲಿನಲ್ಲಿ ಸಾಲ ಪಡೆದ ವಿದ್ಯಾರ್ಥಿಗಳಿಗೆ 2ನೇ ಕಂತಿನ ನವೀಕರಣ ಸಾಲ ಮಂಜೂರು ಮಾಡಲು ವ್ಯಾಸಂಗ ದೃಢೀಕರಣ ಮತ್ತು ಹಿಂದಿನ ವರ್ಷದ ಅಂಕಪಟ್ಟಿ ಸಲ್ಲಿಸಬೇಕು.

ವಿದೇಶ ವಿದ್ಯಾವಿಕಾಸ ಯೋಜನೆ:
ವೀರಶೈವ-ಲಿಂಗಾಯತ ಸಮುದಾಯಕ್ಕೆ ಸೇರಿದ್ದು ಅವರ ಕುಟುಂಬ ವಾರ್ಷಿಕದ ಆದಾಯ ರೂ.8 ಲಕ್ಷಗಳ ಮಿತಿಯಲ್ಲಿರಬೇಕು. ವಿದ್ಯಾರ್ಥಿಗಳು ಕ್ಯೂಎಸ್ ವಿಶ್ವ ರ್ಯಾಂ ಕಿಂಗ್ 500ರೊಳಗೆ ಬರುವ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಪೋಸ್ಟ್ ಡಾಕ್ಟರಲ್, ಪಿಹೆಚ್ಡಿ, ಮಾಸ್ಟರ್ ಡಿಗ್ರಿ ಕೋರ್ಸ್ಗಳಲ್ಲಿ ಉನ್ನತ ವ್ಯಾಸಂಗ ಪಡೆಯಲು ವಾರ್ಷಿಕ ಗರಿಷ್ಟ ರೂ.10 ಲಕ್ಷಗಳಂತೆ 3ವಷÀðದ ಅವಧಿಗೆ ಒಟ್ಟು ರೂ.20 ಲಕ್ಷ ಶೂನ್ಯ ಬಡ್ಡಿದರದಲ್ಲಿ ಸಾಲ ಮಂಜೂರು ಮಾಡಲಾಗುವುದು.

ವಿದೇಶ ವಿದ್ಯಾವಿಕಾಸ ಯೋಜನೆ:
2022-23 ಮತ್ತು 2023-24 ನೇ ಸಾಲಿನಲ್ಲಿ ಸಾಲ ಪಡೆದ ವಿದ್ಯಾರ್ಥಿಗಳಿಗೆ 2ನೇ ಕಂತಿನ ನವೀಕರಣ ಸಾಲ ಮಂಜೂರು ಮಾಡಲು ವ್ಯಾಸಂಗ ದೃಢೀಕರಣ ಮತ್ತು ಹಿಂದಿನ ವರ್ಷದ ಅಂಕಪಟ್ಟಿ ಸಲ್ಲಿಸಬೇಕು.

ಜೀವಜಲ ಯೋಜನೆ:

ವೀರಶೈವ-ಲಿಂಗಾಯತ ಸಮುದಾಯಕ್ಕೆ ಸೇರಿದ್ದು, ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.98 ಸಾವಿರ ಹಾಗೂ ಪಟ್ಟಣ ಪ್ರದೇಶದವರಿಗೆ ರೂ.1.20 ಲಕ್ಷ ಮಿತಿಯೊಳಗಿರುವ ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನುಗಳಿಗೆ ಕೊಳವೆ ಬಾವಿ ಕೊರೆಸುವ ಮುಖೇನ ನೀರಾವರಿ ಸೌಲಭ್ಯ ಒದಗಿಸಲಾಗುತ್ತದೆ.ಕನಿಷ್ಠ 2 ಎಕರೆ ಹಾಗೂ ಗರಿಷ್ಠ 5 ಎಕರೆ ಒಳಗೆ ಜಮೀನು ಹೊಂದಿರಬೇಕು.
ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ರೈತರ ಹಣ್ಣಿನ ಐಡಿ ಮತ್ತು ಸಣ್ಣ ಹಿಡುವಳಿದಾರರ ಪ್ರಮಾಣ ಪತ್ರ ಹೊಂದಿರಬೇಕು.

ಕಾಯ ಕಿರಣ ಯೋಜನೆ:
ವೀರಶೈವ-ಲಿಂಗಾಯತ ಸಮುದಾಯದ ನಿರುದ್ಯೋಗಿಗಳು ಸ್ವಯಂ ಉದ್ಯೋಗ ಕೈಗೊಳ್ಳಲು ಆರ್ಥಿಕ ಚಟುವಟಿಕೆಗಳಿಗನುಸಾರ ಸಾಲ ಮತ್ತು ಸಹಾಯಧನ ಸೌಲಭ್ಯ ಒದಗಿಸಲಾಗುವುದು.
ಘಟಕ ವೆಚ್ಚ 1 ಲಕ್ಷವಿದ್ದಲ್ಲಿ 80 ಸಾವಿರ ಸಾಲ ಮತ್ತು 20 ಸಾವಿರ ಸಹಾಯಧನ ಹಾಗೂ 1 ಲಕ್ಷ ಅಥವಾ 2 ಲಕ್ಷ ಘಟಕ ವೆಚ್ಚಕ್ಕೆ 1.70ಲಕ್ಷ ಸಾಲ ಮತ್ತು 30 ಸಾವಿರ ಸಹಾಯಧನ ವಾರ್ಷಿಕ ಶೇ.4ರಷ್ಟರಂತೆ ಒದಗಿಸಲಾಗುತ್ತದೆ.

ಭೋಜನಾಲಯ ಕೇಂದ್ರ:
ಸಮುದಾಯದ ಜನರು ಹೋಟೆಲ್ (ಖಾನಾವಳಿ) ಉದ್ಯಮ ಕೈಗೊಳ್ಳಲು ಈ ಯೋಜನೆಯಲ್ಲಿ ಸಾಲ ಮತ್ತು ಸಹಾಯಧನ ನೀಡಲಾಗುವುದು.
ಹೋಟೆಲ್ ಉದ್ದಿಮೆ ಕೈಗೊಳ್ಳಲು ಘಟಕ ವೆಚ್ಚ ರೂ.5 ಲಕ್ಷ ಇದರಲ್ಲಿ ರೂ.4.60 ಲಕ್ಷ ಬ್ಯಾಂಕ್ ಸಾಲ ಪಡೆದಿದ್ದಲ್ಲಿ ರೂ. 40 ಸಾವಿರ ಸಹಾಯಧನ ನೆರವು ನೀಡಲಾಗುವುದು. ಫಲಾನುಭವಿಗಳು ತಮ್ಮ ಸ್ವಂತ ಹೆಸರಿನಲ್ಲಿ ಕನಿಷ್ಠ 20*30 ಅಳತೆಯುಳ್ಳ ನಿವೇಶನ ಹೊಂದಿರಬೇಕು.

ವಿಭೂತಿ ನಿರ್ಮಾಣ ಘಟಕ

ವೀರಶೈವ-ಲಿಂಗಾಯತ ಸಮುದಾಯದವರು ವಿಭೂತಿಯನ್ನು ತಯಾರಿಸುವವರಿಗೆ ಸಾಲ ಮತ್ತು ಸಹಾಯಧನ ನೀಡುವ ಯೋಜನೆ ಇದಾಗಿದ್ದು, ಕುಟುಂಬದ ವಾರ್ಷಿಕ ವರಮಾನ ರೂ.3.50 ಲಕ್ಷ, 18 ರಿಂದ 55 ವರ್ಷಗಳ ವಯೋಮಿತಿಯೊಳಗಿರಬೇಕು.

ವಿಭೂತಿ ನಿರ್ಮಾಣ ಘಟಕ ನಿರ್ಮಿಸಲು ಘಟಕ ವೆಚ್ಚ ರೂ.4 ಲಕ್ಷ ಇದರಲ್ಲಿ ರೂ.3.60 ಲಕ್ಷ ನಿಗಮದಿಂದ ಸಾಲ ಮತ್ತು ರೂ. 40 ಸಾವಿರ ಸಹಾಯಧನ ವಾರ್ಷಿಕ ಶೇ.3 ರ ಬಡ್ಡಿದರದಲ್ಲಿ ನೆರವು ನೀಡಲಾಗುವುದು.

ಸ್ವಾವಲಂಭಿ ಸಾರಥಿ ಯೋಜನೆ:
21 ರಿಂದ 45 ವಷÀðಗಳ ವಯೋಮಿತಿಯಲ್ಲಿರುವವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಸ್ವಾವಲಂಬಿ ಸಾರಥಿ ಯೋಜನೆಯಡಿ ನಿರುದ್ಯೋಗಿ ಯುವಜನರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ನಾಲ್ಕು ಚಕ್ರ ವಾಹನ (ಹಳದಿ ಬೊರ್ಡ್) ಖರೀದಿಸಲು ರಾಷ್ಟ್ರೀಕೃತ ಬ್ಯಾಂಕ್ಗಳ ಮೂಲಕ ಪಡೆಯುವ ಸಾಲಕ್ಕೆ ಶೇ.50ರಷ್ಟು ಅಥವಾ ಗರಿಷ್ಠ 3 ಲಕ್ಷ ಸಹಾಯಧನವನ್ನು ನಿಗಮದಿಂದ ಮಂಜೂರು ಮಾಡಲಾಗುವುದು. ಉಳಿದ ಮೊತ್ತವನ್ನು ಸದರಿ ಬ್ಯಾಂಕಿನಲ್ಲಿ ಚಾಲ್ತಿಯಿರುವ ಬಡ್ಡಿದರದಲ್ಲಿ ಸಾಲ ಪಡೆಯಬಹುದು.

ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್ಗಳ ಸಹಯೋಗದೊಂದಿಗೆ):
ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ ಕಲ್ಪಿಸಿಕೊಳ್ಳಲು ಅವರು ಕೈಗೊಳ್ಳುವ ಕೃಷಿ ಅಥವಾ ಕೃಷಿ ಅವಲಂಭಿತ ಚಟುವಟಿಕೆಗಳು, ವ್ಯಾಪಾರ, ಸಾರಿಗೆ ಮತ್ತು ಯಂತ್ರೋಪಕರಣಗಳನ್ನು ಕೊಳ್ಳುವ ಆರ್ಥಿಕ ಚಟುವಟಿಕೆಗಳು, ಉದ್ಯಮಗಳಿಗೆ ವಾಣಿಜ್ಯ ಬ್ಯಾಂಕ್ಗಳ ಮೂಲಕ ಸಾಲ ಪಡೆದಿದ್ದಲ್ಲಿ ನಿಗಮದಿಂದ ಶೇ.20 ರಷ್ಟು ಅಥವಾ ಗರಿಷ್ಠ ರೂ. 1 ಲಕ್ಷಸಹಾಯಧನ ಮಂಜೂರು ಮಾಡಲಾಗುವುದು.

ಸ್ವಾತಂತ್ರ್ಯಿ ಅಮೃತ ಮಹೋತ್ಸವದ ಮುನ್ನಡೆ ಯೋಜನೆ:
ವಿದ್ಯಾವಂತ ಯುವಜನರ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ತರಬೇತಿಯನ್ನು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಾದ ಐಟಿಐಎಸ್, ಜಿಟಿಟಿಸಿ, ಕೆಜಿಟಿಟಿಐ, ಎಟಿಡಿಸಿ, ವಿಟಿಯು ಮೂಲಕ ವಿವಿಧ ಅಲ್ಪಾವಧಿ ಮತ್ತು ಉತ್ಕೃಷ್ಠ ಕೌಶಲ್ಯ ತರಬೇತಿಯನ್ನು ನೀಡಲಾಗುವುದು.

ಅರ್ಹತೆಗಳು:
ಅರ್ಜಿದಾರರು ಹತ್ತನೇ ತರಗತಿ, ದ್ವಿತೀಯ ಪಿಯುಸಿ, ಡಿಪ್ಲೋಮ, ಪದವಿ, ಇಂಜಿನಿಯರಿAಗ್ ವ್ಯಾಸಂಗವನ್ನು ಪೂರ್ಣಗೊಳಿಸಿದ್ದು, ವಯಸ್ಸು 18 ರಿಂದ 25 ವಷÀðಗಳ ಒಳಗಿರಬೇಕು.
ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಆದಾಯ ರೂ.8 ಲಕ್ಷಗಳಿಗಿಂತ ಕಡಿಮೆ ಇರಬೇಕು. ಅರ್ಜಿದಾರರು https://www.kaushalkar.com/ ವೆಬ್ಸೈಟ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು.
2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.ಮಾಹಿತಿ ಹಾಗೂ ವಿವರಗಳಿಗಾಗಿ ನಿಗಮದ ಜಾಲತಾಣ https://kvldcl.karnataka.gov.in ಅಥವಾ ನಿಗಮದ ದೂ: 080-22865522, ಮೊ: 9900012351 ಗೆ ಸಂಪರ್ಕಿಸಬಹುದು.ಹೆಚ್ಚಿನ ಮಾಹಿತಿಗಾಗಿ ನಗರದ ಶ್ರೀ ಕುಮಾರಸ್ವಾಮಿ ಗುಡಿ ಎದುರುಗಡೆಯ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯ ದೂ:08392-267038ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...