ಬೆಂಗಳೂರು ನಗರ ಜಿಲ್ಲೆ : ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ 2023 -24 ನೇ ಸಾಲಿಗೆ ಪಂಚವೃತ್ತಿ ಅಭಿವೃದ್ದಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ ಯೋಜನೆ, ಅರಿವು- ಶೈಕ್ಷಣಿಕ ಸಾಲ ಯೋಜನೆ (ಹೊಸತು), ಅರಿವು- ಶೈಕ್ಷಣಿಕ ಸಾಲ ಯೋಜನೆ (ನವೀಕರಣ), ಗಂಗಾ ಕಲ್ಯಾಣ ಯೋಜನೆ, ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ವಿದೇಶಿ ವ್ಯಾಸಂಗ ಯೋಜನೆ, ಸ್ವಾತಂತ್ರ್ಯ ಅಮೃತ ಮುನ್ನಡೆ ಯೋಜನೆಗಳಿಗೆ ಸಾಲ ಸೌಲಭ್ಯ ಪಡೆಯಲು ಕರ್ನಾಟಕ ವಿಶ್ವಕರ್ಮ ಸಮುದಾಯಕ್ಕೆ ಸೇರಿದ ಫಲಾನುಭವಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು, ಅರ್ಜಿದಾರರು ತಮ್ಮ ಮೊಬೈಲ್ ಸಂಖ್ಯೆಯನ್ನು ಹಾಗೂ ಬ್ಯಾಂಕ್ ಖಾತೆಯನ್ನು ತಮ್ಮ ಆಧಾರ್ ಸಂಖ್ಯೆಗೆ ಜೋಡಣೆ ಮಾಡಿತಬೇಕು.
ಆಸಕ್ತರು ಬೆಂಗಳೂರು ಒನ್, ಕರ್ನಾಟಕ ಒನ್,ಅಟಲ್ –ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ಆನ್ ಲೈನ್ ಮೂಲಕ ಸೇವಾಸಿಂಧೂ ಪೋರ್ಟಲ್ ನಲ್ಲಿ ಅರ್ಜಿಗಳನ್ನು ಆಕ್ಟೋಬರ್ 31 ರೊಳಗೆ ಸಲ್ಲಿಸಬಹುದು .
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ, ಬೆಂಗಳೂರು ದಕ್ಷಿಣ , ನಂ123/1037 ,1ನೇ ಮಹಡಿ ,20ನೇ ಮುಖ್ಯ ರಸ್ತೆ ,5ನೇ ಬ್ಲಾಕ್ ,ವೆಸ್ಟ್ ಆಫ್ ಕಾರ್ಡ್ ರಸ್ತೆ , ರಾಜಜಿನಗರ ಬೆಂಗಳೂರು. ದೂರವಾಣಿ ಸಂಖ್ಯೆ 080-23156006 ಅಥವಾ ಹೆಚ್ಚಿನ ವಿವರಗಳಿಗೆ https://kvcdcl.karnataka.gov.in ನಲ್ಲಿ ತಿಳಿಯಬಹುದು ಎಂದು ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ, ಬೆಂಗಳೂರು ದಕ್ಷಿಣ , ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.