alex Certify ವಿಶ್ವಕರ್ಮ ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಶ್ವಕರ್ಮ ಸಮುದಾಯಕ್ಕೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ : ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮದಿಂದ ವಿಶ್ವಕರ್ಮ ಸಮುದಾಯದ ಹಾಗೂ ಅದರ ಉಪಜಾತಿಗಳಿಗೆ ಸೇರಿದ  ಜನರಿಂದ  ವಿವಿಧ ಯೋಜನೆಗಳಡಿ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಶೈಕ್ಷಣಿಕ ಮತ್ತು ಆರ್ಥಿಕಾಭಿವೃದ್ದಿಗಾಗಿ 2023-24 ನೇ ಸಾಲಿಗೆ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆವು, ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಅರಿವು ಶೈಕ್ಷಣಿಕ ನೇರಸಾಲ ಯೋಜನೆ (ಹೊಸದು ಮತ್ತು ವನೀಕರಣ), ಗಂಗಾಕಲ್ಯಾಣ ಯೋಜನೆ (ಈ ಯೋಜನೆಯಲ್ಲಿ ದ.ಕ., ಉಡುಪಿ, ಕೊಡಗು, ಉ.ಕ., ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು ಮತ್ತು ಇತರೆ ಜಿಲ್ಲೆಗಳಲ್ಲಿ 2 ಎಕರೆ ಜಮೀನು ಹೊಂದಿರಬೇಕು), ಸ್ವಯಂ ಉದ್ಯೋಗ ಸಾಲ ಯೋಜನೆ (ಬ್ಯಾಂಕ್ಗಳ ಸಹಯೋಗದೊಂದಿಗೆ), ಸ್ವಾವಲಂಭಿ ಸಾರಥಿ ಯೋಜನೆ, ವಿದೇಶಿ ವ್ಯಾಸಂಗ ಯೋಜನೆ, ಸ್ವಾತಂತ್ರ್ಯ ಅಮೃತ್ ಮಹೋತ್ಸವ ಮುನ್ನಡೆ ಯೋಜನೆಗಳಡಿ ಸೌಲಭ್ಯ ನೀಡಲು ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ.

ಈ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿದ್ದು, ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆ ಮತ್ತು ಬ್ಯಾಂಕ್ ಖಾತೆಗೆ ಜೋಡಣೆ ಮಾಡಿಸಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ. 18-55 ವರ್ಷಗಳ ವಯೋಮಿತಿಯಿದ್ದು, ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು.

ಮೇಲ್ಕಂಡ ಯೋಜನೆಗಳಿಗೆ ಅರ್ಜಿಗಳನ್ನು ಸೇವಾ ಸಿಂಧು ಪೋರ್ಟಲ್ ಮುಖಾಂತರ ಬೆಂಗಳೂರು ಒನ್, ಕರ್ನಾಟಕ ಒನ್, ಅಟಲ್-ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅಕ್ಟೋಬರ್ 31 ರೊಳಗೆ ಸಲ್ಲಿಸುವುದು.ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ.ದೇವರಾಜ ಅರಸು ನಿಗಮ, ಭಾಗ್ಯ ನಿಲಯ, 1ನೇ ತಿರುವು, ಗಾಂಧಿನಗರ, ಶಿವಮೊಗ್ಗ, ದೂ.ಸಂ: 08182-229634. ವೆಬ್ಸೈಟ್ https://kvcdcl.karnataka.gov.in, ಸಹಾಯವಾಣಿ 080-22374848/7899899039 ಗಳನ್ನು ಸಂಪರ್ಕಿಸುವುದು ಎಂದು ಪ್ರಕಟಣೆ ತಿಳಿಸಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...