
ಬೆಂಗಳೂರು : ರಾಜ್ಯ ಸರ್ಕಾರವು ಅಲ್ಪಸಂಖ್ಯಾತ ಸಮುದಾಯದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿನೀಡಿದ್ದು, ಅಲ್ಪಸಂಖ್ಯಾತ ಸಮುದಾಯದ ವಿಧವೆ, ವಿಚ್ಛೆದಿತ, ಅವಿವಾಹಿತ ಮಹಿಳೆಯರಿಗೆ ಸಹಾಯಧನ, ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು 2023-24ನೇ ಸಾಲಿನ ಅಲ್ಪಸಂಖ್ಯಾತರ ಸಮುದಾಯದ ಕ್ರೈಸ್ತ, ಮುಸಲ್ಮಾನ, ಜೈನ್, ಆಂಗ್ಲೋಇಂಡಿಯನ್ಸ್, ಬೌದ್ಧ, ಸಿಖ್ ಮತ್ತು ಪಾರ್ಸಿ ಜನಾಂಗದವರಿಂದ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಆನ್‍ಲೈನ್ ಅರ್ಜಿ ಆಹ್ವಾನಿಸಿದೆ.
ಶ್ರಮಶಕ್ತಿ ಸಾಲ ಯೋಜನೆಯಡಿ ಕುಲಕಸುಬುದಾರರಿಗೆ ತರಬೇತಿ ನೀಡಿ ಅವರು ತಮ್ಮ ಕಲಾತ್ಮಕ ಮತ್ತು ತಾಂತ್ರಿಕ ಕೌಶಲ್ಯವನ್ನು ವೃದ್ಧಿಸಿಕೊಂಡು ಅದೇ ಕಸುಬನ್ನು ಮುಂದುವರೆಸಲು ಅಥವಾ ಸಣ್ಣ ವ್ಯಾಪಾರವನ್ನು ಪ್ರಾರಂಭಿಸಲು ಅಥವಾ ಅಭಿವೃದ್ಧಿಗೊಳಿಸಲು ನಿಗಮದಿಂದ ಶೇ. 50% ಸಹಾಯಧನದೊಂದಿಗೆ ಕಡಿಮೆ ಬಡ್ಡಿ ದರದಲ್ಲಿ ರೂ. 50 ಸಾವಿರ ಸಾಲ ಸೌಲಭ್ಯವನ್ನು ನೀಡಲಾಗುವುದು. ಆಸಕ್ತರು ಈ ಎಲ್ಲಾ ಯೋಜನೆಗಳಿಗೆ ಅರ್ಜಿಯನ್ನು ವೆಬ್‍ಸೈಟ್ www.kmdconline.karnataka.gov.in ರಲ್ಲಿ ಸಲ್ಲಿಸಬೇಕು.