ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆಗಳಾದ ಚೇತನ ಯೋಜನೆ, ಲಿಂಗತ್ವ ಅಲ್ಪ ಸಂಖ್ಯಾತರ ಪುನರ್ವಸತಿ ಯೋಜನೆ, ಧನಶ್ರೀ ಯೋಜನೆಯಡಿ ಪ್ರೋತ್ಸಾಹಧನ ಮತ್ತು ಉದ್ಯೋಗಿನಿ ಯೋಜನೆಯ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಸೆ.30 ರೊಳಗಾಗಿ ಗ್ರಾಮಾ ಒನ್, ಶಿವಮೊಗ್ಗ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಖುದ್ದಾಗಿ ಅಥವಾ ದೂ, ಸಂ 08182-295514 ಸಂಪರ್ಕಿಸುವಂತೆ ಶಿವಮೊಗ್ಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು
ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ವತಿಯಿಂದ 2024-25ನೇ ಸಾಲಿನ ಉದ್ಯೋಗಿನಿ ಯೋಜನೆ, ಚೇತನ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಧನಶ್ರೀ ಯೋಜನೆ ಮತ್ತು ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹರಿಂದ ಸೇವಾಸಿಂಧು ಪೋರ್ಟಲ್ ನಲ್ಲಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಸೆಪ್ಟೆಂಬರ್ 30, 2024ರ ವರಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, 6ನೇ ಮಹಡಿ, ಜಯನಗರ ವಾಣಿಜ್ಯ ಸಂಕೀರ್ಣ, 4ನೇ ಬ್ಲಾಕ್, ಜಯನಗರ, ಬೆಂಗಳೂರು-11 ಅಥವಾ ದೂರವಾಣಿ ಸಂಖ್ಯೆ : 080-26632792, 26542307 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.