ಬೆಂಗಳೂರು : ಮಹಿಳೆಯರಿಗೆ ನಮ್ಮ ಮೆಟ್ರೋ ಗುಡ್ ನ್ಯೂಸ್ ನೀಡಿದ್ದು, ಶೀಘ್ರದಲ್ಲೇ ಮಹಿಳೆಯರಿಗೆ ಹೆಚ್ಚುವರಿ 2 ಬೋಗಿ ಮೀಸಲಿಡಲು ‘ನಮ್ಮ ಮೆಟ್ರೋ’ ಚಿಂತನೆ ನಡೆಸಿದೆ.
ನಮ್ಮ ಮೆಟ್ರೋದಲ್ಲಿ ಇತ್ತೀಚೆಗೆ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ಹಿನ್ನೆಲೆ ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ ಮೆಟ್ರೋ ರೈಲಿನಲ್ಲಿ ಹೆಚ್ಚುವರಿ 2 ಬೋಗಿ ಮೀಸಲಿಡಲು ನಮ್ಮ ಮೆಟ್ರೋ ಚಿಂತನೆ ನಡೆಸಿದೆ. ಶೀಘ್ರದಲ್ಲೇ ಮೆಟ್ರೋ ಈ ಕ್ರಮ ಕೈಗೊಳ್ಳಲಿದೆ ಎಂದು ತಿಳಿದು ಬಂದಿದೆ.
ಇತ್ತೀಚೆಗಷ್ಟೇ ನಮ್ಮ ಮೆಟ್ರೋದಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಳಕಿಗೆ ಬಂದಿತ್ತು. ಬೆಂಗಳೂರಿನ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಯುವಕನೋರ್ವ ಯುವತಿಯ ಖಾಸಗಿ ಅಂಗ ಸ್ಪರ್ಶಿಸಿ ಕಿರುಕುಳ ನೀಡಿದ್ದನು. ಮೆಟ್ರೋದಿಂದ ಇಳಿಯುತ್ತಿದ್ದಂತೆ ಯುವಕನನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡಿದ್ದರು. ಹೀಗೆ ನಮ್ಮ ಮೆಟ್ರೋದಲ್ಲಿ ಹಲವು ಲೈಂಗಿಕ ಕಿರುಕುಳ ಪ್ರಕರಣಗಳು ವರದಿಯಾಗಿದ್ದು, ಮಹಿಳೆಯರಿಗೆ ಸುರಕ್ಷತೆ ಇಲ್ಲ ಎಂದು ಮಹಿಳೆಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.