ಪ್ರಸಕ್ತ (2023-24) ಸಾಲಿನ ಪ್ರಧಾನಮಂತ್ರಿ ಉದ್ಯೋಗ ಸೃಜನ (ಪಿಎಂಇಜಿಪಿ) ಕಾರ್ಯಕ್ರಮದಡಿಯಲ್ಲಿ ಕೈಗಾರಿಕೆ / ಸೇವಾ ಘಟಕಗಳಿಗೆ ಸಾಲ ಸೌಲಭ್ಯ ಪಡೆಯಲು ಆನ್ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.
18 ವರ್ಷ ತುಂಬಿದ ಪಟ್ಟಣ/ಗ್ರಾಮಾಂತರ ಪ್ರದೇಶದ ಅರ್ಹ ಅಭ್ಯರ್ಥಿಗಳು www.kvic.org.in (pmegp online application) ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗೆ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಕೊಹಿನೂರು ರಸ್ತೆ, ಮಡಿಕೇರಿ ಇವರ ಕಚೇರಿಯನ್ನು ಹಾಗೂ ದೂರವಾಣಿ ಸಂಖ್ಯೆ: 08272-228746 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.