ಬಳ್ಳಾರಿ : ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ 2019-20 ನೇ ಸಾಲಿನಲ್ಲಿ ಬುಡಕಟ್ಟು ಉಪಯೋಜನೆಗೆ ವಿಶೇಷ ಕೇಂದ್ರ ನೆರವಿನಡಿ ಪರಿಶಿಷ್ಟ ವರ್ಗದವರ ಅಭಿವೃದ್ಧಿ ಕಾರ್ಯಕ್ರಮದಡಿ ಸರಕು ಸಾಗಾಣಿಕೆ ವಾಹನ ಖರೀದಿಸಲು ಸಹಾಯಧನಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಸರಕು ಸಾಗಾಣಿಕೆ ವಾಹನ ಘಟಕಕ್ಕೆ 32 ಭೌತಿಕ ಗುರಿ ಹೊಂದಲಾಗಿದೆ.ಜಿಲ್ಲೆಯ ಪರಿಶಿಷ್ಟ ವರ್ಗದ ಜನರಿಗೆ ಸೌಲಭ್ಯವನ್ನು ಒದಗಿಸಲು ಅರ್ಜಿಗಳನ್ನು ಬಳ್ಳಾರಿ, ಸಂಡೂರು ಮತ್ತು ಸಿರುಗುಪ್ಪ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಅಥವಾ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಪಡೆದುಕೊಳ್ಳಬಹುದು.
ಅರ್ಜಿಗಳನ್ನು ಜೂ.25 ರೊಳಗಾಗಿ ಜಿಲ್ಲಾ ಹಾಗೂ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿಗಳಿಗೆ ಸಲ್ಲಿಸಬೇಕು.
*ಷರತ್ತುಗಳು:
ಅರ್ಜಿದಾರರು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. ಬಳ್ಳಾರಿ ಜಿಲ್ಲೆಯವರಾಗಿರಬೇಕು. ವಯಸ್ಸು 18 ರಿಂದ 60 ವರ್ಷಗಳ ಒಳಗಿರಬೇಕು. ಫಲಾನುಭವಿಗಳ ವಾರ್ಷಿಕ ಆದಾಯ ರೂ.1.50 ಲಕ್ಷಗಳ ಒಳಗಡೆ ಇರಬೇಕು. ಅರ್ಜಿದಾರರು ಹಾಗೂ ಅವರ ಅವಲಂಬಿತ ಕುಟುಂಬ ಸದಸ್ಯರು ಸರ್ಕಾರಿ ನೌಕರಿಯಲ್ಲಿರಬಾರದು. ಅರ್ಜಿದಾರರಾಗಲೀ, ಕುಟುಂಬದ ಸದಸ್ಯರಾಗಲೀ ನಿಗಮದ ಯಾವುದೇ ಯೋಜನೆಯಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು. ಘಟಕ ಸದುಪಯೋಗಪಡಿಸಿಕೊಳ್ಳುವ ಬಗ್ಗೆ ಪ್ರಮಾಣ ಪತ್ರ ಅಥವಾ ಮುಚ್ಚಳಿಕೆ ಪತ್ರ ನೀಡಬೇಕು. ಅರ್ಜಿದಾರರು ಬಿಪಿಎಲ್ ಕಾರ್ಡ್ ಮತ್ತು ಆಧಾರ್ಕಾರ್ಡ್ ಹೊಂದಿರಬೇಕು. ಸರಕು ಸಾಗಾಣಿಕೆ ವಾಹನ ಘಟಕಕ್ಕೆ ಡ್ರೈವಿಂಗ್ ಲೈಸನ್ಸ್ ಪಡೆದಿರಬೇಕು.ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿ ಅಥವಾ ಮೊ.9740578247 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಸಕೀನಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.