ಬೆಂಗಳೂರು : ಮನೆ ಬಾಗಿಲಿಗೆ ತೆರಳಿ ಉಚಿತವಾಗಿ ಖಾತಾ ನೀಡುವ ವಿನೂತನ ವ್ಯವಸ್ಥೆಯನ್ನು ದೇಶದಲ್ಲಿಯೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಜಾರಿಗೆ ತರಲಾಗಿದೆ. ಈ ಕಾರ್ಯಕ್ರಮಕ್ಕೆ ಏಪ್ರಿಲ್ನಿಂದ ಚಾಲನೆ ದೊರೆಯಲಿದೆ ಎಂದು ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.
ಮನೆ ಬಾಗಿಲಿಗೆ ತೆರಳಿ ಉಚಿತವಾಗಿ ಖಾತೆ ನೀಡುವ ವಿನೂತನ ವ್ಯವಸ್ಥೆಯನ್ನು ಇಡೀ ದೇಶದಲ್ಲಿಯೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಜಾರಿಗೆ ತರಲಾಗಿದೆ. ಈ ಕಾರ್ಯಕ್ರಮಕ್ಕೆ ಏಪ್ರಿಲ್ ತಿಂಗಳಿನಿಂದ ಚಾಲನೆ ದೊರೆಯಲಿದೆ. ಪ್ರತಿಯೊಂದು ಆಸ್ತಿ ದಾಖಲೆಗಳನ್ನು ಡಿಜಿಟಲೀಕರಣ ಮಾಡಲಾಗಿದೆ. ಅಕಸ್ಮಾತ್ ತಪ್ಪಿಹೋಗಿದ್ದಲ್ಲಿ ಅಂತವರು ತಮ್ಮ ದಾಖಲೆಗಳನ್ನು ಮತ್ತೆ ನೀಡಬಹುದು. ಬೆಂಗಳೂರು ನಗರದ ಪ್ರತಿ ಕ್ಷೇತ್ರದ ಶಾಸಕರ ಬಳಿ ಮಾತನಾಡಿ, ಕ್ಷೇತ್ರವಾರು ಕಾರ್ಯಕ್ರಮ ನಡೆಸಿ ಈ ಬಗ್ಗೆ ಅರಿವು ಮೂಡಿಸಲಾಗುವುದು ಎಂದರು.
ನಗರದ ಸುಮಾರು 7 ಲಕ್ಷ ಮನೆಗಳು ತೆರಿಗೆ ಕಟ್ಟಿರಲಿಲ್ಲ, ಇವುಗಳಲ್ಲಿ 1 ಲಕ್ಷ ಮನೆಗಳು ತೆರಿಗೆ ವ್ಯಾಪ್ತಿಗೆ ಬಂದಿದ್ದು, ಇನ್ನೂ 6 ಲಕ್ಷ ಮನೆಗಳನ್ನು ತೆರಿಗೆ ವ್ಯಾಪ್ತಿಗೆ ತರಬೇಕಿದೆ. ಆದ ಕಾರಣ ಒಂದು ಬಾರಿ ಪಾವತಿಗೆ ಅವಕಾಶ (ಓಟಿಎಸ್) ಮಾಡಿಕೊಡಲಾಯಿತು. ಅಕ್ರಮ ನಿರ್ಮಾಣಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಅವಕಾಶ ಪಾಲಿಕೆಗೆ ಇರಲಿಲ್ಲ. ಕಳೆದ ವಾರ ಸದನದಲ್ಲಿ ಈ ಬಗ್ಗೆ ವಿಧೇಯಕ ಅಂಗೀಕಾರ ವಾಗಿದೆ. ಜೊತೆಗೆ ಕಂದಾಯ ಬಡಾವಣೆಗಳಲ್ಲಿ ಇರುವ ಖಾಸಗಿ ರಸ್ತೆಗಳನ್ನೂ ಸಹ ಸರ್ಕಾರಿ ರಸ್ತೆಗಳು ಎಂದು ಘೋಷಣೆ ಮಾಡಲಾಗುವುದು ಎಂದರು.
ಮನೆ ಬಾಗಿಲಿಗೆ ತೆರಳಿ ಉಚಿತವಾಗಿ ಖಾತಾ ನೀಡುವ ವಿನೂತನ ವ್ಯವಸ್ಥೆಯನ್ನು ದೇಶದಲ್ಲಿಯೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಜಾರಿಗೆ ತರಲಾಗಿದೆ. ಈ ಕಾರ್ಯಕ್ರಮಕ್ಕೆ ಏಪ್ರಿಲ್ನಿಂದ ಚಾಲನೆ ದೊರೆಯಲಿದೆ ಎಂದು ಉಪ ಮುಖ್ಯಮಂತ್ರಿಗಳಾದ @DKShivakumar ಅವರು ತಿಳಿಸಿದ್ದಾರೆ. pic.twitter.com/iIazTYAEHt
— DIPR Karnataka (@KarnatakaVarthe) March 25, 2025