alex Certify GOOD NEWS : ಇನ್ಮುಂದೆ ಅಂಚೆ ಮೂಲಕ ಮನೆ ಬಾಗಿಲಿಗೆ ಬರಲಿದೆ ಜನನ/ಮರಣ ಪ್ರಮಾಣ ಪತ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS : ಇನ್ಮುಂದೆ ಅಂಚೆ ಮೂಲಕ ಮನೆ ಬಾಗಿಲಿಗೆ ಬರಲಿದೆ ಜನನ/ಮರಣ ಪ್ರಮಾಣ ಪತ್ರ

ಶಿವಮೊಗ್ಗ: ಇನ್ನು ಮುಂದೆ ಜನನ/ಮರಣ ಪ್ರಮಾಣ ಪತ್ರಗಳನ್ನು ಮನೆ ಬಾಗಿಲಿಗೆ ಅಂಚೆಯಣ್ಣನ ಮೂಲಕ ತಲುಪಿಸುವ ವಿಶಿಷ್ಟ ಸೇವೆಯನ್ನು ಶಿವಮೊಗ್ಗ ಅಂಚೆ ವಿಭಾಗದಲ್ಲಿ ಪರಿಚಯಿಸಲಾಗಿದೆ.

ಭಾರತೀಯ ಅಂಚೆ ಇಲಾಖೆ ಮತ್ತು ಶಿವಮೊಗ್ಗ ಮಹಾನಗರ ಪಾಲಿಕೆ ಸಹಯೋಗದಲ್ಲಿ ಈ ವಿಶಿಷ್ಟ ಸೇವೆಗೆ ಚಾಲನೆ ನೀಡಲಾಗಿದೆ.

ಪ್ರಮಾಣ ಪತ್ರಗಳನ್ನು ಮನೆ ಬಾಗಿಲಿನಲ್ಲಿ ಪಡೆಯಲು ಮಹಾನಗರ ಪಾಲಿಕೆ ಜನನ/ಮರಣ ಕೌಂಟರ್ ನಲ್ಲಿ ನಿಗದಿತ ನಮೂನೆ ಅರ್ಜಿ ಪಡೆದು, ನಿಮ್ಮ ವಿಳಾಸವನ್ನು ನಮೂದಿಸಿ ಕೋರಿಕೆಯನ್ನು ಸಲ್ಲಿಸಬಹುದಾಗಿದೆ.  ಪ್ರಮಾಣ ಪತ್ರವನ್ನು ಅಂಚೆ ಇಲಾಖೆಯ ಸ್ಪೀಡ್ ಪೋಸ್ಟ್ ಮೂಲಕ ಕಳುಹಿಸಲಾಗುವುದು. ವಿಳಾಸದಾರರು ಬಟಾವಡೆಯ ಸಮಯದಲ್ಲಿ 80 ರೂ. ಪಾವತಿಸಿ ಜನನ/ಮರಣ ಪ್ರಮಾಣ ಪತ್ರವನ್ನು ಪಡೆಯಬಹುದಾಗಿದೆ ಎಂದು ಶಿವಮೊಗ್ಗ ಅಂಚೆ ಅಧೀಕ್ಷಕರಾದ ಜಯರಾಮ ಶೆಟ್ಟಿ. ಜಿ. ತಿಳಿಸಿದ್ದಾರೆ.

 

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...