ನವದೆಹಲಿ : ಸ್ವಂತ ಮನೆ ಹೊಂದುವ ಕನಸು ಕಂಡವರಿಗೆ ಕೇಂದ್ರ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಸೆಪ್ಟೆಂಬರ್ ನಿಂದ ನಗರ ಪ್ರದೇಶಗಳಲ್ಲಿ ಗೃಹ ಸಾಲದ ಮೇಲಿನ ಬಡ್ಡಿ ಸಹಾಯಧನವನ್ನು ಸರ್ಕಾರ ಘೋಷಿಸಿದೆ.
ನಗರದಲ್ಲಿ ಮನೆಗಳನ್ನು ನಿರ್ಮಿಸುವವರಿಗೆ ಬ್ಯಾಂಕ್ ಸಾಲದ ಮೇಲಿನ ಬಡ್ಡಿ ಸಹಾಯಧನ ನೀಡುವ ಯೋಜನೆಯನ್ನು ಮುಂದಿನ ತಿಂಗಳು ಪ್ರಾರಂಭಿಸಲಾಗುವುದು. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಘೋಷಿಸಿದ ಈ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ.
ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುವ ಮಧ್ಯಮ ವರ್ಗದವರಿಗೆ ಸ್ವಂತ ಮನೆ ಹೊಂದುವುದನ್ನು ನನಸಾಗಿಸಲು ಪ್ರಧಾನಿ ನರೇಂದ್ರ ಮೋದಿ ಈ ಯೋಜನೆಯನ್ನು ಘೋಷಿಸಿದ್ದರು. ಬ್ಯಾಂಕ್ ಸಾಲಗಳ ಮೇಲೆ ಬಡ್ಡಿ ಸಹಾಯಧನ ನೀಡುವ ಯೋಜನೆಯನ್ನು ಸೆಪ್ಟೆಂಬರ್ನಲ್ಲಿ ಪ್ರಾರಂಭಿಸಲಾಗುವುದು ಎಂದು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಯೋಜನೆಯ ನೀಲನಕ್ಷೆಯನ್ನು ಸಿದ್ಧಪಡಿಸಲಾಗುತ್ತಿದೆ. ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುವವರಿಗೆ ಸ್ವಂತ ಮನೆ ಹೊಂದುವ ಕನಸನ್ನು ನನಸಾಗಿಸಲು ಕುಟುಂಬಕ್ಕೆ ಲಕ್ಷಾಂತರ ರೂಪಾಯಿಗಳ ಆರ್ಥಿಕ ನೆರವು ನೀಡುವ ಗುರಿಯನ್ನು ಈ ಯೋಜನೆ ಹೊಂದಿದೆ.