ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2024-25 ನೇ ಸಾಲಿಗೆ 13 ವಿವಿಧ ಫಲಾನುಭವಿ ಆಧಾರಿತ ಯೋಜನೆಗಳಡಿ ಜಿಲ್ಲೆಯ ವಿಕಲಚೇತನರಿಂದ (ಅಂಗವಿಕಲರು) ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಹೆಚ್.ಗೋವಿಂದಪ್ಪ ಅವರು ತಿಳಿಸಿದ್ದಾರೆ.
ಯೋಜನೆಗಳು
ಆಧಾರ ಯೋಜನೆ, ಮೆರಿಟ್ ವಿದ್ಯಾರ್ಥಿಗಳಿಗಾಗಿ ಪ್ರೋತ್ಸಾಹಧನ ಯೋಜನೆ, ಮರಣ ಪರಿಹಾರ ನಿಧಿ, ವೈದ್ಯಕೀಯ ಪರಿಹಾರ ನಿಧಿ, ನಿರುದ್ಯೋಗ ಭತ್ಯೆ, ಪ್ರತಿಭೆ ಯೋಜನೆ, ಸಾಧನೆ ಯೋಜನೆ, ಶಿಶುಪಾಲನಾ ಭತ್ಯೆ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ಟಾಪ್ ಯೋಜನೆ, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆ, ಸಾಧನ ಸಲಕರಣೆ ಯೋಜನೆ, ಶ್ರವಣ ದೋಷ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ, ದೃಷ್ಠಿದೋಷ ಹೊಂದಿರುವ ವಿಕಲಚೇತನರಿಗೆ ಬ್ರೈಲ್ ಕಿಟ್ ಯೋಜನೆ.
ಮೇಲ್ಕಂಡ ಯೋಜನೆಗಳಿಗೆ ಸೇವಾಸಿಂಧು, ಗ್ರಾಮ ಒನ್, ಬಳ್ಳಾರಿ ಒನ್ ಮತ್ತು ಸೇವಾ ಕೇಂದ್ರಗಳಲ್ಲಿ ಆನ್ಲೈನ್ (https://sevasindhu.karnataka.gov.in/Sevasindhu/Department Services Kannada) ಮೂಲಕ ಅರ್ಜಿ ಸಲ್ಲಿಸಿ, ಸ್ವೀಕೃತಿಯೊಂದಿಗೆ ಹಾರ್ಡ್ ಪ್ರತಿಯನ್ನು ಆಯಾ ತಾಲ್ಲೂಕಿನ ತಾಲ್ಲೂಕು ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದ್ದೋದ್ದೇಶ ಪುನರ್ವಸತಿ ಕಾರ್ಯಕರ್ತ (ಎಂ.ಆರ್.ಡಬ್ಲ್ಯೂ)ರಿಗೆ ಆಗಸ್ಟ್ 31 ರೊಳಗಾಗಿ ಸಲ್ಲಿಸಬೇಕು.
ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸಬಯಸುವ ಫಲಾನುಭವಿಗಳಿಗೆ ಸೇವಾಸಿಂಧು ಡಿ.ಬಿ.ಟಿ (ನೇರ ನಗದು ವರ್ಗಾವಣೆ) ಮೂಲಕ ಆನ್ಲೈನ್ ವೇದಿಕೆ ತಂತ್ರಾಂಶದಡಿ ಅಳವಡಿಸಲಾಗಿರುತ್ತದೆ
ಹೆಚ್ಚಿನ ಮಾಹಿತಿಗಾಗಿ ವಿವಿದ್ದೋದ್ದೇಶ ಪುನರ್ವಸತಿ ಕಾರ್ಯಕರ್ತರು: ಬಳ್ಳಾರಿ-8880875620, ಕುರುಗೋಡು-9538000887, ಸಿರುಗುಪ್ಪ-9743509698, ಸಂಡೂರು-9632052270 ಅಥವಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕಚೇರಿಯ ದೂ.08392-267886 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.