alex Certify BIG NEWS : ರಾಜ್ಯದ ರಾಮಭಕ್ತರಿಗೆ ಸರ್ಕಾರದಿಂದ ಗುಡ್ ನ್ಯೂಸ್ : ಅಯೋಧ್ಯೆಯಲ್ಲಿ ತಲೆ ಎತ್ತಲಿದೆ ‘ಕರ್ನಾಟಕ ಯಾತ್ರಿ ನಿವಾಸ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯದ ರಾಮಭಕ್ತರಿಗೆ ಸರ್ಕಾರದಿಂದ ಗುಡ್ ನ್ಯೂಸ್ : ಅಯೋಧ್ಯೆಯಲ್ಲಿ ತಲೆ ಎತ್ತಲಿದೆ ‘ಕರ್ನಾಟಕ ಯಾತ್ರಿ ನಿವಾಸ’

ಬೆಂಗಳೂರು : ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗುತ್ತಿದ್ದು, ಈ ಐತಿಹಾಸಿಕ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ದಿನಗಣನೆ ಆರಂಭವಾಗಿದೆ.

ಕೆಲವೇ ದಿನಗಳಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗಲಿದ್ದು, ಕರ್ನಾಟಕದಿಂದ ಹೆಚ್ಚಿನ ಸಂಖ್ಯೆಯಲ್ಲಿ ರಾಮಭಕ್ತರು ಅಯೋಧ್ಯೆಗೆ ಬರಲಿದ್ದಾರೆ. ಅವರಿಗಾಗಿ ವಸತಿ, ಊಟದ ವ್ಯವಸ್ಥೆಗಾಗಿ ಅತಿಥಿ ಗೃಹ ನಿರ್ಮಾಣ ಮಾಡುವಂತೆ ಉತ್ತರ ಪ್ರದೇಶಕ್ಕೆ  ರಾಜ್ಯಸರ್ಕಾರ ಪತ್ರ ಬರೆದಿದೆ. ಸರಯೂ ನದಿ ಸಮೀಪದಲ್ಲಿ 10 ಕೋಟಿ ವೆಚ್ಚದಲ್ಲಿ ಅತಿಥಿ ಗೃಹ ನಿರ್ಮಿಸುವಂತೆ 2023ರ ಆಗಸ್ಟ್ ತಿಂಗಳಲ್ಲಿ ಉತ್ತರ ಪ್ರದೇಶ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದರು. ಅಲ್ಲದೇ 2020 ರಲ್ಲಿ ಕೂಡ B.S   ಯಡಿಯೂರಪ್ಪ ಯುಪಿ ಸಿಎಂ ಗೆ ಪತ್ರ ಬರೆದು ಮನವಿ ಸಲ್ಲಿಸಿದ್ದರು.

ಇದೀಗ ರಾಜ್ಯದ ಈ ಮನವಿಗೆ ಯೋಗಿ ಸರ್ಕಾರದ ಹೌಸಿಂಗ್ ಬೋರ್ಡ್ ಪ್ರತಿಕ್ರಿಯೆ ನೀಡಿದ್ದು, ಅಯೋಧ್ಯೆಯಲ್ಲಿ ಕರ್ನಾಟಕ ಅತಿಥಿ ಗೃಹ ನಿರ್ಮಾಣಕ್ಕೆ ಬೇಕಾದ ಪೂರ್ವ ತಯಾರಿಯನ್ನ ಮುಜರಾಯಿ ಇಲಾಖೆ ಮಾಡುತ್ತಿದೆ. ಈ ಮೂಲಕ ರಾಜ್ಯದ ಪ್ರವಾಸಿಗರಿಗೆ ವಾಸ್ತವ್ಯ ಹೂಡಲು ತೊಂದರೆ ಆಗದಂತೆ ಕ್ರಮಕ್ಕೆ ಕೈಗೊಳ್ಳುವುದಾಗಿ ತಿಳಿಸಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...