ಬೆಂಗಳೂರು : ಉದ್ಯೋಗಾಂಕ್ಷಿಗಳಿಗೆ ರಾಜ್ಯ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ನೀಡಿದ್ದು, ‘ನಿಪುಣ ಕರ್ನಾಟಕ ‘ಯೋಜನೆಗೆ ಶೀಘ್ರ ಚಾಲನೆ ನೀಡಲಿದೆ.
ಉದ್ಯೋಗ ಸನ್ನದ್ಧತೆಗಾಗಿ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವ ಮೂಲಕ ಉದ್ಯೋಗಾವಕಾಶ ಮತ್ತು ಉದ್ಯಮಶೀಲತೆಯನ್ನು ಹೆಚ್ಚಿಸಲು ʼನಿಪುಣ ಕರ್ನಾಟಕʼಕ್ಕೆ ಶೀಘ್ರ ಚಾಲನೆ ನೀಡಲಾಗುವುದು ಎಂದು ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
11 ಜಿಲ್ಲೆಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು
ಬಡ ವಿದ್ಯಾರ್ಥಿಗಳ ವೈದ್ಯಕೀಯ ಶಿಕ್ಷಣದ ಕನಸನ್ನು ನನಸು ಮಾಡಬೇಕೆಂಬ ಉದ್ದೇಶ ನಮ್ಮ ಸರ್ಕಾರದ್ದಾಗಿದೆ. ಈಗಾಗಲೇ ರಾಜ್ಯದ 22 ಜಿಲ್ಲೆಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳು ಕಾರ್ಯನಿರ್ವಹಿಸುತ್ತಿವೆ. ಇನ್ನುಳಿದ 11 ಜಿಲ್ಲೆಗಳಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ತೆರೆಯಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.ತುಮಕೂರು, ದಾವಣಗೆರೆ, ಚಿತ್ರದುರ್ಗ, ಬಾಗಲಕೋಟೆ, ಕೋಲಾರ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ವಿಜಯಪುರ, ವಿಜಯನಗರ ಹಾಗೂ ರಾಮನಗರ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜುಗಳು ತಲೆ ಎತ್ತಲಿವೆ.