ಬೆಂಗಳೂರು : ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ ಟಿ-20 ಕ್ರಿಕೆಟ್ ಪಂದ್ಯಗಳ ವೀಕ್ಷಣೆಗಾಗಿ ನಮ್ಮ ಮೆಟ್ರೋ ಏಪ್ರಿಲ್ 02, 10, 18, 24 ಹಾಗೂ ಮೇ 03, 13, 17 ರಂದು ಎಲ್ಲಾ ನಾಲ್ಕು ಟರ್ಮಿನಲ್ ಅಂದರೆ ವೈಟ್ಫೀಲ್ಡ್ (ಕಾಡುಗೋಡಿ), ಚಲ್ಲಘಟ್ಟ, ರೇಷ್ಮೆ ಸಂಸ್ಥೆ ಮತ್ತು ಮಾದವರ ಮೆಟ್ರೋ ರೈಲು ಸೇವೆಯನ್ನು ರಾತ್ರಿ 12.30ರ ವರೆಗೆ ವಿಸ್ತರಿಸಿದೆ.
ಕ್ರಿಕೆಟ್ ಪ್ರೇಮಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಐಪಿಎಲ್ ಪಂದ್ಯ ವೀಕ್ಷಿಸಲು ನಮ್ಮ ಮೆಟ್ರೋ ಸೇವೆ ಅವಧಿ ವಿಸ್ತರಣೆ ಮಾಡಲಾಗಿದೆ. ಈ ಬಗ್ಗೆ ಬಿಎಂಆರ್’ಸಿಎಲ್ ಪ್ರಕಟಣೆ ಹೊರಡಿಸಿದೆ.ಬೆಂಗಳೂರಿನಲ್ಲಿ ನಡೆಯಲಿರುವ TATA IPL T-20 ಕ್ರಿಕೆಟ್ ಪಂದ್ಯಗಳ ವೀಕ್ಷಣೆಗಾಗಿ, ನಮ್ಮ ಮೆಟ್ರೋ ದಿನಾಂಕ 02, 10, 18, ಹಾಗೂ 24ನೇ ಏಪ್ರಿಲ್ ಮತ್ತು 03, 13 ಹಾಗೂ 17ನೇ ಮೇ, 2025 ರಂದು ಎಲ್ಲಾ ನಾಲ್ಕು ಟರ್ಮಿನಲ್ ಅಂದರೆ ವೈಟ್ಫೀಲ್ಡ್ (ಕಾಡುಗೋಡಿ), ಚಲ್ಲಘಟ್ಟ ರೇಷ್ಮೆ ಸಂಸ್ಥೆ ಮತ್ತು ಮಾದವರ ಮೆಟ್ರೋ ನಿಲ್ದಾಣಗಳಿಂದ ಕೊನೆಯ ಮೆಟ್ರೋ ರೈಲು ಸೇವೆಯನ್ನು ಮರುದಿನ ಮುಂಜಾನೆ 12.30ರ ವರೆಗೆ ವಿಸ್ತರಿಸಿದೆ. ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ನಿಂದ ಎಲ್ಲಾ ನಾಲ್ಕು ದಿಕ್ಕುಗಳ ಕಡೆಗೆ ಕೊನೆಯ ರೈಲು ಮಧ್ಯರಾತ್ರಿ 01.15 ಕ್ಕೆ ಹೊರಡಲಿದೆ ಎಂದು ಬಿಎಂಆರ್’ಸಿಎಲ್ ಪ್ರಕಟಣೆ ಹೊರಡಿಸಿದೆ. ನಾಡಪ್ರಭು ಕೆಂಪೇಗೌಡ ಮೆಜೆಸ್ಟಿಕ್ ನಿಲ್ದಾಣದಿಂದ ಎಲ್ಲಾ ನಾಲ್ಕು ದಿಕ್ಕುಗಳ ಕಡೆಗೆ ಕೊನೆಯ ರೈಲು ಮಧ್ಯರಾತ್ರಿ 1.15ಕ್ಕೆ ಹೊರಡಲಿದೆ.