ಬೆಂಗಳೂರು : ಅಲ್ಪಸಂಖ್ಯಾತ ಸಮುದಾಯ’ದ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ ನೀಡಿದ್ದು, ಇನ್ಮುಂದೆ ರಾಜ್ಯ ಸರ್ಕಾರದಿಂದಲೇ ‘ವಿದ್ಯಾರ್ಥಿ ವೇತನ’ ನೀಡಲಾಗುತ್ತದೆ ಎಂದು ಅವರು ಹೇಳಿದರು.
ಸಭೆ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ನೀಡುತ್ತಿದ್ದ ವಿದ್ಯಾರ್ಥಿ ವೇತನ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವೇ ಇದನ್ನು ಭರಿಸಲು ತೀರ್ಮಾನಿಸಿದೆ ಎಂದರು. 6.4 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಿಡುಗಡೆಗೆ ಸಿದ್ಧವಾಗಿದೆ.
ಆಯವ್ಯಯದಲ್ಲಿ 60 ಕೋಟಿ ರೂ. ನಿಗದಿಯಾಗಿದೆ ಎಂದು ಸಿಎಂ ಮಾಹಿತಿ ನೀಡಿದರು.ಅಲ್ಪಸಂಖ್ಯಾತರಿಗೆ ವಿವಿಧ ಸೌಲಭ್ಯ, ಸವಲತ್ತು ವಿತರಿಸುವ ವಿವಿಧ ಯೋಜನೆಗಳಿಗೆ ಆನ್ಲೈನ್ ಮೂಲಕ ಭಾರಿ ಪ್ರಮಾಣದಲ್ಲಿ ಅರ್ಜಿ ಸ್ವೀಕೃತವಾಗಿದ್ದು, ಮುಂದಿನ ವರ್ಷದಲ್ಲಿ ಹೆಚ್ಚಿನ ಅನುದಾನ ಒದಗಿಸಲಾಗುತ್ತದೆ ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಸತಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು.ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ಹಜ್ ಸಚಿವ ಬಿ.ಝಡ್. ಜಮೀರ್ ಅಹ್ಮದ್ ಖಾನ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ಕೆ.ಗೋವಿಂದರಾಜು, ನಸೀರ್ ಅಹ್ಮದ್ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.