ಬೆಂಗಳೂರು : ದೀಪಾವಳಿ ಹಬ್ಬದ ಸಂಭ್ರಮದಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ಶೀಘ್ರವೇ ಗುಡ್ ನ್ಯೂಸ್ ಸಿಗುವ ಸಾಧ್ಯತೆಯಿದೆ.
ಹೌದು, ರಾಜ್ಯ ಸರ್ಕಾರವು ಶೀಘ್ರವೇ ಡಿಎ ಹೆಚ್ಚಳ ಮಾಡುವ ಸಾಧ್ಯತೆಯಿದೆ. ಈ ಕುರಿತು ಕರ್ನಾಟಕ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ ಎಸ್ ಷಡಾಕ್ಷರಿ ತಿಳಿಸಿದ್ದಾರೆ.
ತುಟ್ಟಿ ಭತ್ಯೆ ಆದೇಶದ ಕಡತ ಸರ್ಕಾರದಲ್ಲಿ ಅನುಮೋದನೆಗೆ ಬಾಕಿಯಿದ್ದು, ಸೋಮವಾರ ಅಥವಾ ಮಂಗಳವಾರ ಆದೇಶ ಪ್ರಕಟವಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಸರ್ಕಾರ ಎಷ್ಟು ಡಿಎ ಹೆಚ್ಚಳ ಮಾಡಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.ಕಳೆದ ತಿಂಗಳು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತನ್ನ ನೌಕರರಿಗೆ ಸಿಹಿ ಸುದ್ದಿ ನೀಡಿತ್ತು. ಶೇಕಡ 3 ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿ ಆದೇಶ ಹೊರಡಿಸಿತ್ತು. ದೀಪಾವಳಿಗೆ ಮುಂಚಿತವಾಗಿ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ತುಟ್ಟಿಭತ್ಯೆ (ಡಿಎ) ಯಲ್ಲಿ ಶೇಕಡಾ 3 ರಷ್ಟು ಹೆಚ್ಚಳ ಮಾಡಿತ್ತು.