ಬೆಂಗಳೂರು : ರಾಜ್ಯದ 1-10 ತರಗತಿ ಮಕ್ಕಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ನಾಳೆ ರಾಗಿ ‘ಹೆಲ್ತ್ ಮಿಕ್ಸ್’ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.
ಸರಕಾರಿ ಮತ್ತು ಶಾಲೆಗಳ ಒಂದರಿಂದ ಅನುದಾನಿತ ಹತ್ತನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ರಾಗಿ ಮಿಕ್ಸ್ ನೀಡುವ ಕಾರ್ಯಕ್ರಮಕ್ಕೆ ಫೆ.22ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಶಿಕ್ಷಣ ಸಚಿವರು ವಾರದಲ್ಲಿ ಮೂರು ದಿನ ಕ್ಷೀರಭಾಗ್ಯ ಯೋಜನೆಯ ಬಿಸಿ ಹಾಲಿನಲ್ಲಿ ಮಿಶ್ರಣ ಮಾಡಿ ಕುದಿಸಿ ರಾಗಿ ಹೆಲ್ತ್ ಮಿಕ್ಸ್ ನ್ನು ಮಕ್ಕಳಿಗೆ ನೀಡಲಾಗುತ್ತದೆ ಎಂದರು.