ಬೆಂಗಳೂರು : ರಾಜ್ಯದ ರೈತರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಶೀಘ್ರವೇ ಪ್ರತಿನಿತ್ಯ 7 ಗಂಟೆ ತ್ರಿಫೇಸ್ ವಿದ್ಯುತ್ ಪೂರೈಕೆ ಮಾಡುವುದಾಗಿ ತಿಳಿಸಿದೆ.
ಈ ಕುರಿತು ಇಂಧನ ಸಚಿವ ಕೆ.ಜೆ ಜಾರ್ಜ್ ಮಾತನಾಡಿದ್ದು, ಈಗ ಕೆಲವೆಡೆ ಮಳೆ ಆಗಿದ್ದು, ಬೇಡಿಕೆ ಕಡಿಮೆಯಾಗಿದೆ. ಜಲ ವಿದ್ಯುತ್, ಉಷ್ಣ, ಪವನ ಮತ್ತು ಸೌರ ವಿದ್ಯುತ್ ಉತ್ಪಾದನೆ ಹೆಚ್ಚಾಗಿದೆ. ಪಂಜಾಬ್ ಮತ್ತು ಉತ್ತರ ಪ್ರದೇಶದಿಂದ ವಿದ್ಯುತ್ ಖರೀದಿಸಲಾಗುತ್ತಿದೆ. ಆದ್ದರಿಂದ ಕೃಷಿಗೆ ಕಡಿತ ಮಾಡಿರುವ ವಿದ್ಯುತ್ ಪೂರೈಕೆಯನ್ನು ಮತ್ತೆ ನೀಡಲಾಗುವುದು. , ಶೀಘ್ರವೇ ಪ್ರತಿನಿತ್ಯ 7 ಗಂಟೆ ವಿದ್ಯುತ್ ಪೂರೈಕೆ ಮಾಡಲಾಗುತ್ತದೆ. ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಒಂದೆರಡು ದಿನಗಳಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಲಿದ್ದು, ಅಲ್ಲಿ ಈ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.
ಕೃಷಿಗೆ ನಿತ್ಯ 5 ಗಂಟೆ ತ್ರಿಫೇಸ್ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ. ನಿತ್ಯ 7 ಗಂಟೆ ವಿದ್ಯುತ್ ಪೂರೈಸುವ ನಿರ್ಧಾವನ್ನು ಶೀಘ್ರವೇ ಕೈಗೊಳ್ಳಲಾಗುತ್ತದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.