
ಬೆಂಗಳೂರು : ರಾಜ್ಯದ ರೈತರಿಗೆ ಕೃಷಿ ಸಚಿವ ಚಲುವರಾಯಸ್ವಾಮಿ ಗುಡ್ ನ್ಯೂಸ್ ನೀಡಿದ್ದು, ಬೆಳಗ್ಗೆಯೂ ತ್ರೀ ಫೇಸ್ ವಿದ್ಯುತ್ ನೀಡಲಾಗುವುದು ಎಂದು ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿದ ಸಚಿವರು ಬೆಳಗ್ಗೆಯೂ ತ್ರಿ ಫೇಸ್ ನಲ್ಲಿ ವಿದ್ಯುತ್ ಕೊಡುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆದಿದೆ. ಶೀಘ್ರದಲ್ಲೇ ಈ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವರು ಹೇಳಿದರು.
ರಾತ್ರಿ ಹೊತ್ತು ಹೊಲಗಳಿಗೆ ನೀರು ಹಾಯಿಸಲು ಹೋಗುವುದು ಬಹಳ ಅಪಾಯಕಾರಿ, ಕಾಡು ಪ್ರದೇಶಗಳಲ್ಲಿ ವನ್ಯ ಜೀವಿಗಳಿಂದ ಅಪಾಯವಾಗುವ ಸಾಧ್ಯತೆ ಹೆಚ್ಚಿರುತ್ತದೆ. ಈ ವಿಚಾರ ನಮ್ಮ ಗಮನಕ್ಕೆ ಬಂದಿದ್ದು, ಬೆಳಗ್ಗೆ ಸಮಯದಲ್ಲೇ ತ್ರಿ ಫೇಸ್ ನಲ್ಲಿ ವಿದ್ಯುತ್ ಕೊಡುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆದಿದೆ. ಅಧಿವೇಶನ ನಡೆದ ಬಳಿಕ ಈ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಚಿವರು ಹೇಳಿದರು.