ಬೆಂಗಳೂರು : ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಖಾತೆಗೆ ಶಿವರಾತ್ರಿಗೆ ಮುನ್ನ ಹಣ ಜಮಾ ಮಾಡುವ ಸಾಧ್ಯತೆ ಇದೆ.
ಹೌದು, ಮಹಿಳೆಯರ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣ ಬಿಡುಗಡೆ ಮಾಡಲು ಮುಂದಾಗಿದೆ.
ನವೆಂಬರ್ ತಿಂಗಳ ಹಣ ಇಂದೇ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುತ್ತದೆ. ಹಾಗೂ ಡಿಸೆಂಬರ್ ತಿಂಗಳ ಹಣವನ್ನು ಮುಂದಿನ ಸೋಮವಾರ ಹಾಕಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೂರು ತಿಂಗಳ ಹಣ ಬಿಡುಗಡೆಗೆ ಸರ್ಕಾರ ಮುಂದಾಗಿದ್ದು, ಮಹಿಳೆಯರಿಗೆ ಕೊಂಚ ರಿಲೀಫ್ ಸಿಕ್ಕಿದೆ.
ಗೃಹಲಕ್ಷ್ಮಿ ಯೋಜನೆಗೆ ತಾಲೂಕು ಪಂಚಾಯಿತಿ ಮೂಲಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಹಣ ವರ್ಗಾವಣೆ ವಿಳಂಬವಾಗಿದೆ. ಶೀಘ್ರವೇ ಗೃಹಲಕ್ಷ್ಮಿ ಯೋಜನೆ ಎಲ್ಲಾ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗಲಿದೆ . ಈ ಹಿಂದಿನಂತೆ ಜಿಲ್ಲಾ ಉಪನಿರ್ದೇಶಕರ ಮೂಲಕ ಗೃಹಲಕ್ಷ್ಮಿ ಯೋಜನೆ, ಹಣ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ. ತಾಲೂಕು ಪಂಚಾಯಿತಿ ಮೂಲಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಹಣ ರವಾನೆಯಾಗುತ್ತಿದೆ. ಉಪನಿರ್ದೇಶಕರ ಮೂಲಕ ಹಣ ಪಾವತಿಸಲಾಗುವುದು. ಆರ್ಥಿಕ ಇಲಾಖೆಯಿಂದ 15 ದಿನಗಳ ಹಿಂದೆಯೇ ಹಣ ಬಂದಿದೆ. ತಾಲೂಕು ಪಂಚಾಯಿತಿ ಕಚೇರಿಗಳಿಂದ ಇಲಾಖೆಗೆ ಹಣ ಬರುವುದು ವಿಳಂಬವಾಗುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.