alex Certify GOOD NEWS : ರಾಜ್ಯ ಸರ್ಕಾರದಿಂದ ಮಹಾನಗರ ಪಾಲಿಕೆಯ ಖಾಯಂ ನೌಕರರಿಗೆ ಗುಡ್ ನ್ಯೂಸ್ : ‘7ನೇ ವೇತನ ಆಯೋಗ ಸೌಲಭ್ಯ’ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS : ರಾಜ್ಯ ಸರ್ಕಾರದಿಂದ ಮಹಾನಗರ ಪಾಲಿಕೆಯ ಖಾಯಂ ನೌಕರರಿಗೆ ಗುಡ್ ನ್ಯೂಸ್ : ‘7ನೇ ವೇತನ ಆಯೋಗ ಸೌಲಭ್ಯ’ ವಿಸ್ತರಣೆ

ರಾಜ್ಯ ಸರ್ಕಾರದಿಂದ ಮಹಾನಗರ ಪಾಲಿಕೆಯ ಖಾಯಂ ನೌಕರರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, 7ನೇ ವೇತನ ಆಯೋಗ ವಿಸ್ತರಣೆ ಮಾಡಲಾಗಿದೆ.

ಪರಿಷ್ಕೃತ ವೇತನ ಶ್ರೇಣಿಯಲ್ಲಿ ವೇತನ ನಿಗಧಿಪಡಿಸುವ ಕುರಿತು ವಿಸ್ತಾರವಾದ ಆದೇಶವನ್ನು ಹೊರಡಿಸಲಾಗಿರುತ್ತದೆ. ಸದರಿ ಆದೇಶದ ಕಂಡಿಕೆ (11.1) ರಲ್ಲಿ ಪರಿಷ್ಕೃತ ವೇತನ ಶ್ರೇಣಿಗಳ ಸೌಲಭ್ಯಗಳನ್ನು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರು ಹಾಗೂ ಸ್ಥಳೀಯ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳ ಭೋದಕೇತರ ಸಿಬ್ಬಂದಿಗಳಿಗೂ ಸಹಾ ವಿಸ್ತರಿಸಲಾಗಿರುತ್ತದೆ. ಈ ಕುರಿತಂತೆ ಆದೇಶಗಳನ್ನು ಸಂಬಂಧಪಟ್ಟ ಆಡಳಿತ ಇಲಾಖೆಗಳು ಪ್ರತ್ಯೇಕವಾಗಿ ಆದೇಶ ಹೊರಡಿಸುವಂತೆ ನಮೂದಿಸಲಾಗಿರುತ್ತದೆ.

ಸರ್ಕಾರದ ಆದೇಶ ಸಂಖ್ಯೆ: ಆಇ / ಪಿಇಎನ್ / 262 / 2024, ದಿನಾಂಕ: 28.08.2024 ರಲ್ಲಿ ರಾಜ್ಯ ಸರ್ಕಾರಿ ನಿವೃತ್ತಿದಾರರಿಗೆ ಪಿಂಚಣಿ ಮತ್ತು ಪಿಂಚಣಿ ಸೌಲಭ್ಯಗಳನ್ನು ಪರಿಷ್ಕರಿಸಿ ಆದೇಶ ಹೊರಡಿಸಲಾಗಿರುತ್ತದೆ. ಆದ್ದರಿಂದ, 7ನೇ ವೇತನ ಆಯೋಗದ ಶಿಫಾರಸ್ಸಿನಂತೆ 2024ರ ಪರಿಷ್ಕೃತ ಪಿಂಚಣಿ ಶ್ರೇಣಿಯನ್ನು ಮಹಾನಗರ ಪಾಲಿಕೆ ವೃಂದದ ಪಿಂಚಣಿದಾರರಿಗೆ ಯಥಾವತ್ತಾಗಿ ವಿಸ್ತರಿಸಲು ಆದೇಶ ಹೊರಡಿಸುವಂತೆ ಜಂಟಿ ನಿರ್ದೇಶಕರು (ಹಣಕಾಸು), ಪೌರಾಡಳಿತ ನಿರ್ದೇಶನಾಲಯ ರವರು ಕೋರಿರುತ್ತಾರೆ.

ಜಂಟಿ ನಿರ್ದೇಶಕರು (ಹಣಕಾಸು), ಪೌರಾಡಳಿತ ನಿರ್ದೇಶನಾಲಯ ರವರ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿದ ಸರ್ಕಾರವು ಈ ಕೆಳಕಂಡಂತೆ ಆದೇಶಿಸಿದೆ.7ನೇ ರಾಜ್ಯ ವೇತನ ಆಯೋಗವು ಶಿಫಾರಸ್ಸು ಮಾಡಿರುವಂತೆ, ಸರ್ಕಾರದ ಆದೇಶ ಸಂಖ್ಯೆ: ಆಇ 21 2 4 2024, ໖: 22.07.2024, 17.08.2024 2 23.08.2024 ก่ ಹೊರಡಿಸಲಾಗಿದ್ದು, ಸದರಿ ಆದೇಶಗಳಲ್ಲಿ ತಿಳಿಸಿರುವಂತೆ, 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸಿನನ್ವಯ ಪರಿಷ್ಕೃತ ವೇತನ ಶ್ರೇಣಿಗಳನ್ನು ಮತ್ತು ಸೌಲಭ್ಯಗಳನ್ನು ಯಥಾವತ್ತಾಗಿ ರಾಜ್ಯದ 10 ಮಹಾನಗರ ಪಾಲಿಕೆಗಳ ನೌಕರರುಗಳಿಗೂ ಸಹಾ ಯಥಾವತ್ತಾಗಿ ಜಾರಿಗೊಳಿಸಲು ಆದೇಶಿಸಿದೆ. ಇದಕ್ಕೆ ತಗಲುವ ವೆಚ್ಚವನ್ನು ರಾಜ್ಯ ಹಣಕಾಸು ಆಯೋಗದ ವೇತನ ಅನುದಾನದಿಂದ ಭರಿಸತಕ್ಕದ್ದು.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...