ಬೆಂಗಳೂರು : ಗ್ರಾಮ ಪಂಚಾಯಿತಿ ನೌಕರರ ಸಮಸ್ಯೆ ಪರಿಹರಿಸಿ ಬಡ್ತಿ ನೀಡಲಾಗುವುದು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ರಾಜ್ಯದ ವಿವಿಧ ಜಿಲ್ಲೆಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಕರ ವಸೂಲಿಗಾರರು, ಕ್ಲರ್ಕ್ ಮತ್ತು ಡಾಟಾ ಎಂಟ್ರಿ ಆಪರೇಟರ್ಗಳು, ನೀರಗಂಟಿಗಳು, ಜವಾನರು, ಸ್ವಚ್ಛತಾ ಕೆಲಸಗಾರರು, ದ್ವಿತೀಯ ದರ್ಜೆ ಸಹಾಯಕರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗೆಜೆಟೆಡ್ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಸಮಸ್ಯೆಗಳನ್ನು ಆದ್ಯತೆಯ ಮೇರೆಗೆ ಬಗೆಹರಿಸಲಾಗುವುದು. ಜ್ಯೇಷ್ಠತೆಯ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಬಡ್ತಿ ನೀಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.