ಬೆಂಗಳೂರು : ರಾಜ್ಯದ ವಿವಿಧ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 592 ಒಳಚರಂಡಿ ಕಾರ್ಮಿಕರ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಅಗತ್ಯ ಮಾಹಿತಿಯನ್ನು ನೀಡುವಂತೆ ಸುತ್ತೋಲೆ ಹೊರಡಿಸಿದೆ.
ಆಡಳಿತ ಇಲಾಖೆಯ ಪ್ರಸ್ತಾವನೆಯನ್ನು ಪರಿಶೀಲಿಸಿದ ನಂತರ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಿಗೆ (ಬಿ.ಬಿ.ಎಂ.ಪಿ ಹೊರತುಪಡಿಸಿ) ಆರ್ಥಿಕ ಇಲಾಖೆಯು ಈಗಾಗಲೇ ಅನುಮತಿ ನೀಡಿ ಭರ್ತಿಯಾಗದೇ ಖಾಲಿ ಇರುವ ಪೌರ ಕಾರ್ಮಿಕರ ಹುದ್ದೆಗಳಿಗೆದುರಾಗಿ 592- UGD ಹೆಲ್ಪರ್ಸ್ಗಳನ್ನು ನೇರನೇಮಕಾತಿ ಅಡಿ ಭರ್ತಿ ಮಾಡಿಕೊಳ್ಳಲು ಆರ್ಥಿಕ ಇಲಾಖೆಯು ಸಹಮತಿಸಿದೆ.
ಮೇಲ್ಕಂಡ ಆರ್ಥಿಕ ಇಲಾಖೆಯ ಅಭಿಪ್ರಾಯದ ಹಿನ್ನೆಲೆಯಲ್ಲಿ ಉಲ್ಲೇಖಿತ ತಮ್ಮ ಪ್ರಸ್ತಾವನೆಯನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲು ಸರ್ಕಾರದ ವಿವಿಧ ಅಧಿಸೂಚನೆಗಳಲ್ಲಿ (2017, 2022 ಮತ್ತು 2023) ಪೌರಕಾರ್ಮಿಕರ ವಿಶೇಷ ನೇಮಕಾತಿಗೆ ಅನುಮತಿ ನೀಡಲಾಗಿದ್ದು, ಸದರಿ ಆದೇಶಗಳನ್ವಯ ನೇಮಕಾತಿ ಮಾಡಿಕೊಂಡ ನಂತರದಲ್ಲಿ ರಾಜ್ಯದ ಮಹಾನಗರ ಪಾಲಿಕೆಗಳಲ್ಲಿ ಭರ್ತಿ ಆಗದೇ ಖಾಲಿ ಇರುವ ಪೌರಕಾರ್ಮಿಕರ ಪಾಲಿಕೆವಾರು ಹುದ್ದೆಗಳ ಸಂಖ್ಯೆಯನ್ನು ಕೂಡಲೇ ಸರ್ಕಾರಕ್ಕೆ ಸಲ್ಲಿಸುವಂತೆ ತಮ್ಮನ್ನು ಕೋರಲು ನಿರ್ದೇಶಿಸಲ್ಪಟ್ಟಿದ್ದೇನೆ ಎಂದು ನಗರಾಭಿವೃದ್ದಿ ಇಲಾಖೆ ಶಾಖಾಧಿಕಾರಿ ಸುತ್ತೋಲೆ ಹೊರಡಿಸಿದ್ದಾರೆ.