ಬೆಂಗಳೂರು : ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್ : ಸಿಕ್ಕಿದ್ದು, ರಾಜ್ಯ ಸರ್ಕಾರ ಆರೋಗ್ಯ ವಿಮೆ ಯೋಜನೆ ಜಾರಿಗೊಳಿಸಲು ಮುಂದಾಗಿದೆ.
ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.
ಹಿರಿಯರು ಸಮಾಜಕ್ಕೆ ಮಾರ್ಗದರ್ಶಕರು. ಅವರಿಗೆ ಗೌರವ ಕೊಡುವ ಉದ್ದೇಶದಿಂದಲೇ ರಾಜ್ಯದಲ್ಲಿ 50.69 ಲಕ್ಷ ಮಂದಿಗೆ ಮಾಸಾಶನ ನೀಡಲಾಗುತ್ತಿದೆ. ಸದ್ಯ ರಾಜ್ಯದಲ್ಲಿ 63 ವೃದ್ಧಾಶ್ರಮಗಳನ್ನು ತೆರೆಯಲಾಗಿದ್ದು, 1,575 ಹಿರಿಯ ನಾಗರಿಕರು ಆಶ್ರಯ ಪಡೆದಿದ್ದಾರೆ. ಇನ್ನೂ 19 ವೃದ್ಧಾಶ್ರಮಗಳನ್ನು ತೆರೆಯುವ ಪ್ರಕ್ರಿಯೆ ಜಾರಿಯಲ್ಲಿದೆ. ಹಿರಿಯರಿಗಾಗಿ ಆರೋಗ್ಯ ವಿಮೆ ಯೋಜನೆ ಜಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.