alex Certify GOOD NEWS : ಒಳಮೀಸಲಾತಿ ಕಲ್ಪಿಸುವ ನ್ಯಾ.ನಾಗಮೋಹನ್ ದಾಸ್ ಆಯೋಗ ಮಧ್ಯಂತರ ವರದಿ ಅಂಗೀಕಾರ : ಸಿಎಂ ಸಿದ್ದರಾಮಯ್ಯ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS : ಒಳಮೀಸಲಾತಿ ಕಲ್ಪಿಸುವ ನ್ಯಾ.ನಾಗಮೋಹನ್ ದಾಸ್ ಆಯೋಗ ಮಧ್ಯಂತರ ವರದಿ ಅಂಗೀಕಾರ : ಸಿಎಂ ಸಿದ್ದರಾಮಯ್ಯ ಹೇಳಿಕೆ

ಬೆಂಗಳೂರು : ನಿವೃತ್ತ ನ್ಯಾಯಮೂರ್ತಿಗಳಾದ ಹೆಚ್.ಎನ್. ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಸಂಬಂಧ ರಚಿಸಲಾಗಿದ್ದ ಏಕಸದಸ್ಯ ಆಯೋಗ ನೀಡಿದ ಮಧ್ಯಂತರ ವರದಿಯನ್ನು ನನ್ನ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯು ಅಂಗೀಕರಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನಿವೃತ್ತ ನ್ಯಾಯಮೂರ್ತಿಗಳಾದ ಹೆಚ್.ಎನ್. ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಸಂಬಂಧ ರಚಿಸಲಾಗಿದ್ದ ಏಕಸದಸ್ಯ ಆಯೋಗ ನೀಡಿದ ಮಧ್ಯಂತರ ವರದಿಯನ್ನು ನನ್ನ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯು ಅಂಗೀಕರಿಸಿದೆ. ಈ ಆಯೋಗವು ನಾಲ್ಕು ಪ್ರಮುಖ ಶಿಫಾರಸ್ಸುಗಳನ್ನು ಮಾಡಿದೆ.

ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಯಲ್ಲಿರುವ ಉಪಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ಹೊಸದಾದ ಸಮೀಕ್ಷೆ ನಡೆಸಿ ದತ್ತಾಂಶವನ್ನು ಸಂಗ್ರಹಿಸಬೇಕು. ಆಧುನಿಕ ವಿಜ್ಞಾನ ಮತ್ತು ತಂತ್ರಜ್ಞಾನದ ಸಾಧನಗಳನ್ನು ಬಳಸಿ 30 ರಿಂದ 40 ದಿವಸಗಳೊಳಗೆ ಹೊಸ ಸಮೀಕ್ಷೆಯನ್ನು ನಡೆಸಬಹುದೆಂದು ತಜ್ಞರು ಅಭಿಪ್ರಾಯ ಪಡುತ್ತಾರೆ. ಹೊಸದಾದ ಸಮೀಕ್ಷೆ ನಡೆಸಲು ಅಗತ್ಯವಿರುವ ಪ್ರಶ್ನಾವಳಿಯನ್ನು ಸಿದ್ಧಪಡಿಸಬೇಕು. ಯಾವ ಸಂಸ್ಥೆಯಿಂದ ಸಮೀಕ್ಷೆ ನಡೆಸಬೇಕು, ಸಮೀಕ್ಷೆಗೆ ಅಗತ್ಯವಿರುವ ತರಬೇತಿ, ಸಂಪನ್ಮೂಲ ಕ್ರೋಢೀಕರಣಗಳ ಉಸ್ತುವಾರಿಗಾಗಿ ಉನ್ನತ ಮಟ್ಟದ ಸಮಿತಿಯನ್ನು ರಚಿಸುವುದು ಸೂಕ್ತವೆಂದು ಆಯೋಗವು ಅಭಿಪ್ರಾಯಪಟ್ಟಿದೆ. ಹೊಸ ಸಮೀಕ್ಷೆಯಿಂದ ಸಂಗ್ರಹಿಸಿದ ದತ್ತಾಂಶದ ಆಧಾರದ ಮೇಲೆ ಈ ವರದಿಯಲ್ಲಿ ತಿಳಿಯಪಡಿಸಿರುವ ಮಾನದಂಡಗಳಂತೆ ಪರಿಶಿಷ್ಟ ಜಾತಿಯಲ್ಲಿರುವ ಉಪಜಾತಿಗಳ ವರ್ಗೀಕರಣಗೊಳಿಸಿ ಲಭ್ಯವಿರುವ ಮೀಸಲಾತಿ ಪ್ರಮಾಣವನ್ನು ಆದ್ಯತೆ ಮೇಲೆ ಹಂಚಿಕೆ ಮಾಡಬೇಕು ಎಂದು ಸಮಿತಿ ಶಿಫಾರಸ್ಸು ಮಾಡಿದೆ. ನಾಗಮೋಹನ್ ದಾಸ್ ಆಯೋಗದವರ ಮಧ್ಯಂತರ ವರದಿಯನ್ನು ಸಚಿವ ಸಂಪುಟ ಇಂದು ಅಂಗೀಕರಿಸಿದೆ. ಒಳಮೀಸಲಾತಿ ವರ್ಗೀಕರಣವನ್ನು ಶೀಘ್ರಗತಿಯಲ್ಲಿ ಕೈಗೊಳ್ಳುವ ಸಂಬಂಧ, ಹೊಸ ಸಮೀಕ್ಷೆ ನಡೆಸುವ ಕಾರ್ಯವನ್ನು ನಾಗಮೋಹನ್ ದಾಸ್ ಸಮಿತಿಗೆ ವಹಿಸಲು ಸಚಿವ ಸಂಪುಟ ನಿರ್ಣಯಿಸಿದೆ. ಸಮೀಕ್ಷಾ ಕಾರ್ಯವನ್ನು 60 ದಿನದೊಳಗೆ ಪೂರ್ಣಗೊಳಿಸಿ ವರದಿ ಸಲ್ಲಿಸಲು ಅನುಕೂಲವಾಗುವಂತೆ ಸಮಿತಿಯ ಅವಧಿಯನ್ನು ಎರಡು ತಿಂಗಳವರೆಗೆ ವಿಸ್ತರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...