ಬೆಂಗಳೂರು : ರಾಜ್ಯದ 262 ಸರ್ಕಾರಿ ಶಾಲೆಗಳಲ್ಲಿ ಸೆಪ್ಟೆಂಬರ್ ತಿಂಗಳಿನಿಂದಲೇ ಎಲ್ ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಲು ಸಮಗ್ರ ಶಿಕ್ಷಣ ಕರ್ನಾಟಕ ನಿರ್ದೇಶನಾಲಯ ಸಿದ್ಧತೆ ನಡೆಸಿದೆ.
ರಾಜ್ಯದ ಆಯ್ದ 262 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪ್ರಸಕ್ತ ಸಾಲಿನಿಂದಲೇ ಎಲ್ ಕೆಜಿ, ಯುಕೆಜಿ ಆರಂಭಿಸಲು ಅಗತ್ಯ ಪೂರ್ವ ಸಿದ್ಧತೆ ಮಾಡಿಕೊಳ್ಳಲು ಜಿಲ್ಲಾ ಉಪನಿರ್ದೇಶಕರಿಗೆ ಸಮಗ್ರ ಶಿಕ್ಷಣ ಕರ್ನಾಟಕ ನಿರ್ದೇಶನಾಲಯ ಸೂಚನೆ ನೀಡಿದೆ.
ರಾಜ್ಯದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳೂ ಸೇರಿದಂತೆ ಒಟ್ಟ 900 ಶಾಲೆಗಳಲ್ಲಿ ಈಗಾಗಲೇ ಎಲ್ ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಲಾಗುತ್ತಿದೆ. ಪ್ರತಿ ತರಗತಿಯು ಕನಿಷ್ಟ 20 ಮತ್ತು ಗರಿಷ್ಟ 30 ಮಕ್ಕಳನ್ನು ದಾಖಲಾತಿ ಮಾಡಿಕೊಳ್ಳುವ ಸಾಮರ್ಥ್ಯ ಹೊಂದಿರಬೇಕು ಎಂದು ಮಂಡಳಿಯು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು.
ಶಿಕ್ಷಣ ಸಚಿವಾಲಯವು ರಾಜ್ಯದ 262 ಸರ್ಕಾರಿ ಶಾಲೆಗಳಲ್ಲಿ ಈ ಬಾರಿ ಎಲ್ ಕೆಜಿ, ಯುಕೆಜಿ ತರಗತಿಗಳನ್ನು ಪ್ರಾಯೋಗಿಕವಾಗಿ ಆರಂಭಿಸಲು ಅನುಮೋದನೆ ನೀಡಿದೆ. ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳ 262 ಸರ್ಕಾರಿ ಶಾಲೆಗಳಲ್ಲಿ ಎಲ್ ಕೆಜಿ,ಯುಕೆಜಿ ಆರಂಭಕ್ಕೆ ಪೂರ್ವ ಸಿದ್ಧತೆ ಮಾಡಿಕೊಳ್ಳಲು ಸಮಗ್ರ ಶಿಕ್ಷಣ ಇಲಾಖೆ ಡಿಡಿಪಿಐಗಳಿಗೆ ಸೂಚನೆ ನೀಡಿದೆ.