ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಬಿಎಸ್ಸಿ ನರ್ಸಿಂಗ್ ಮತ್ತು ಜಿಎನ್ಎಂ ನರ್ಸಿಂಗ್ ಕೋಸ್(B.Sc Nursing and GNM Nursing Course)ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತರ ಸಮುದಾಯದ(ಮುಸ್ಲಿಂ, ಕ್ರಿಶ್ಚಿಯನ್, ಜೈನ್ ಸಿಖ್, ಬೌದ್ಧ, ಮತ್ತು ಪಾರ್ಸಿ) ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನವನ್ನು ನೀಡಲು ಸೇವಾಸಿಂಧು ಪೋರ್ಟಲ್ ಮೂಲಕ ಅನ್‌ಲೈನ್‌ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕರ್ನಾಟಕ ರಾಜ್ಯದಲ್ಲಿ B.Sc Nursing and GNM Nursing Course ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳು https://sevasindhu.karnataka.gov.in ಲಿಂಕ್ ಮೂಲಕ ದಾಖಲೆಗಳೊಂದಿಗೆ ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಅರ್ಜಿ ಸಲ್ಲಿಸಲು 10-11-2024 ಕೊನೆಯ ದಿನಾಂಕವಾಗಿರುತ್ತದೆ.
ಅರ್ಹತೆಗಳು:
ವಿದ್ಯಾರ್ಥಿಯು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು, ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು.(ಮುಸ್ಲಿಂ, ಕ್ರಿಶ್ಚಿಯನ್, ಜೈನ್ ಸಿಖ್, ಬೌದ್ಧ, ಮತ್ತು ಪಾರ್ಸಿ), ಕೋರ್ಸ್ನ ಅವಧಿ-ಪೂರ್ಣಾವಧಿ, ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ರೂ. ಮೀರಿರಬಾರದು, ವಿದ್ಯಾರ್ಥಿಗಳನ್ನು ಅನುದಾನದ ಲಭ್ಯತೆಯನುಸಾರ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಹೆಚ್ಚಿನ ಮಾಹಿತಿ ಹಾಗೂ ವಿವರವಾದ ಸೂಚನೆಗಳು/ವಿಧಾನಗಳಿಗೆ ಅಭ್ಯರ್ಥಿಗಳು ಅಲ್ಪಸಂಖ್ಯಾತರ ನಿರ್ದೇಶನಾಲಯ ಬೆಂಗಳೂರು ಅಧಿಕೃತ ವೆಬ್‌ಸೈಟ್ https://dom.karnataka.gov.in ಅನ್ನು ವೀಕ್ಷಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸ ಬೇಕಾದ ವಿಳಾಸ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಆಕಾಶವಾಣಿ ಹಿಂಭಾಗ, ಸಾಲಗಾಮೆ ಮುಖ್ಯ ರಸ್ತೆ, ಹಾಸನ. ದೂರವಾಣಿ ಸಂಖ್ಯೆ: 08172-268373 / 08172-267373 ಅಥವಾ ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.