ಬೆಂಗಳೂರು: ಹಿಜಾಬ್ ವಿವಾದದ ಬಳಿಕ ಉನ್ನತ ಶಿಕ್ಷಣದಿಂದ ವಂಚಿತರಾಗುತ್ತಿರುವ ಅಲ್ಪಸಂಖ್ಯಾತ ಸಮುದಾಯದ ಹೆಣ್ಣು ಮಕ್ಕಳ ಭವಿಷ್ಯ ಗಮನದಲ್ಲಿಟ್ಟುಕೊಂಡು ಪ್ರತಿ ಜಿಲ್ಲೆಯಲ್ಲಿಯೂ ವಕ್ಫ್ ಮಂಡಳಿಯಿಂದ ಪದವಿ ಪೂರ್ವ ಕಾಲೇಜು ಸ್ಥಾಪಿಸಲಾಗುವುದು ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಘೋಷಿಸಿದ್ದಾರೆ.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ವಕ್ಪ್ ಮಂಡಳಿ ವತಿಯಿಂದ ಹಜ್ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 100 ಮದರಸಾಗಳಲ್ಲಿ ಔಪಚಾರಿಕ ಶಿಕ್ಷಣಕ್ಕೆ ಚಾಲನೆ, 26 ಜಿಲ್ಲೆಗಳಿಗೆ ಆಂಬುಲೆನ್ಸ್ ವಿತರಣೆ, 15 ಮಹಿಳಾ ಕಾಲೇಜುಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
15 ಜಿಲ್ಲೆಗಳಲ್ಲಿ ಮಹಿಳಾ ಕಾಲೇಜ್ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಪ್ರತಿ ಜಿಲ್ಲೆಯಲ್ಲಿ ಒಂದು ಕಾಲೇಜು ಸ್ಥಾಪಿಸಲು ತೀರ್ಮಾನಿಸಲಾಗಿದೆ. ಈ ಕಾಲೇಜುಗಳನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ನಡೆಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.