alex Certify ಪ್ರಯಾಣಿಕರಿಗೆ ಗುಡ್ ನ್ಯೂಸ್: ರಜೆ ಪ್ರಯುಕ್ತ ವಿಶೇಷ ರೈಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಯಾಣಿಕರಿಗೆ ಗುಡ್ ನ್ಯೂಸ್: ರಜೆ ಪ್ರಯುಕ್ತ ವಿಶೇಷ ರೈಲು

ಬೆಂಗಳೂರು: ಕ್ರಿಸ್ಮಸ್ ರಜೆ ಹಿನ್ನೆಲೆಯಲ್ಲಿ ನೈರುತ್ಯ ರೈಲ್ವೆ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು- ಕಲಬುರಗಿ ನಿಲ್ದಾಣಗಳ ನಡುವೆ ಪ್ರತಿ ದಿಕ್ಕಿನಲ್ಲಿ ಎರಡು ಟ್ರಿಪ್ ವಿಶೇಷ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.

ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು –ಕಲಬುರಗಿ ವಿಶೇಷ ಎಕ್ಸ್ ಪ್ರೆಸ್ ರೈಲು(06519) ಡಿಸೆಂಬರ್ 27 ಮತ್ತು 28 ರಂದು ರಾತ್ರಿ 9:15ಕ್ಕೆ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣದಿಂದ ಹೊರಟು ಮರುದಿನ ಬೆಳಗ್ಗೆ 7.40ಕ್ಕೆ ಕಲಬುರಗಿ ತಲುಪಲಿದೆ.

ಕಲಬುರಗಿ –ಎಸ್ಎಂವಿವಿ ಬೆಂಗಳೂರು ಎಕ್ಸ್ ಪ್ರೆಸ್ ವಿಶೇಷ ರೈಲು(06520) ಕಲಬುರಗಿಯಿಂದ ಡಿಸೆಂಬರ್ 28 ಮತ್ತು 29ರಂದು ಬೆಳಗ್ಗೆ 9:35 ಕ್ಕೆ ಹೊರಡಲಿದ್ದು, ಅದೇ ದಿನ ರಾತ್ರಿ 8 ಗಂಟೆಗೆ ಬೆಂಗಳೂರು ತಲುಪಲಿದೆ. ಈ ವಿಶೇಷ ರೈಲುಗಳು ಯಲಹಂಕ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯ ರಸ್ತೆ, ರಾಯಚೂರು, ಕೃಷ್ಣ, ಯಾದಗಿರಿ ಮತ್ತು ಶಹಬಾದ್ ಗಳಲ್ಲಿ ನಿಲುಗಡೆ ಇರುತ್ತದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...