ಆರ್‌ಆರ್‌ಬಿ(ರೈಲ್ವೆ ನೇಮಕಾತಿ ಮಂಡಳಿ) ಪರೀಕ್ಷೆಗಳಿಗೆ ಹಾಜರಾಗುವ ಅಭ್ಯರ್ಥಿಗಳಿಗೆ ಹೆಚ್ಚಿನ ಅನುಕೂಲಕ್ಕಾಗಿ ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ಮತ್ತು ಕರ್ನೂಲ್ ಸಿಟಿ ನಿಲ್ದಾಣಗಳ ನಡುವೆ 4 ಟ್ರಿಪ್ ವಿಶೇಷ ಕಾಯ್ದಿರಿಸದ ರೈಲು ಸೇವೆಯನ್ನು ಓಡಿಸಲು ರೈಲ್ವೆ ಮಂಡಳಿಯು ಸೂಚಿಸಿದೆ.
ಹುಬ್ಬಳ್ಳಿ-ಕರ್ನೂಲ್ ಸಿಟಿ ನಡುವೆ ಕಾಯ್ದಿರಿಸದ ವಿಶೇಷ ರೈಲುಗಳ ಸಂಚಾರ ಇರಲಿದೆ. ಆರ್‌ಆರ್‌ಬಿ (ರೈಲ್ವೆ ನೇಮಕಾತಿ ಮಂಡಳಿ) ಪರೀಕ್ಷೆಗಳಿಗೆ ಹಾಜರಾಗುವ ಅಭರ್ಥಿಗಳಿಗೆ ಹೆಚ್ಚಿನ ಅನುಕೂಲಕ್ಕಾಗಿ ಶ್ರೀ ಸಿದ್ದಾರೂಢ ಸ್ವಾಮೀಜಿ ಹುಬ್ಬಳ್ಳಿ ಮತ್ತು ಕರ್ನೂಲ್ ಸಿಟಿ ನಿಲ್ದಾಣಗಳ ನಡುವೆ 4 ಟ್ರಿಪ್ ವಿಶೇಷ ಕಾಯ್ದಿರಿಸದ ರೈಲು ಸೇವೆಯನ್ನು ಓಡಿಸಲು ರೈಲ್ವೆ ಮಂಡಳಿಯು ಸೂಚಿಸಿದೆ. ವಿವರಗಳು ಈ ಕೆಳಗಿನಂತಿವೆ:
ರೈಲು ಸಂಖ್ಯೆ 07315 ಎಸ್ಎಸ್ಎಸ್ ಹುಬ್ಬಳ್ಳಿ-1 ಹುಬ್ಬಳಿ-ಕರ್ನೂಲ್ ಸಿಟಿ ಕಾಯ್ದಿರಿಸದ ವಿಶೇಷ ಎಕ್ಸ್ ಪ್ರೆಸ್ ರೈಲು ನವೆಂಬರ್ 24, 25, 26 ಮತ್ತು 27 ರಂದು ರಾತ್ರಿ 8:15 ಗಂಟೆಗೆ ಹುಬ್ಬಳ್ಳಿಯಿಂದ ಹೊರಟು ಮರುದಿನ ಬೆಳಿಗ್ಗೆ 6:00 ಗಂಟೆಗೆ ಕರ್ನೂಲ್ ಸಿಟಿ ನಿಲ್ದಾಣವನ್ನು ತಲುಪಲಿದೆ.
ರೈಲು ಸಂಖ್ಯೆ 07316 ಕರ್ನೂಲ್ ಸಿಟಿ-ಎಸ್‌ಎಸ್‌ಎಸ್ ಹುಬ್ಬಳ್ಳಿ ಕಾಯ್ದಿರಿಸದ ವಿಶೇಷ ಎಕ್ಸ್ ಪ್ರೆಸ್ ರೈಲು ನವೆಂಬರ್ 25, 26, 27 ಮತ್ತು 28 ರಂದು ಬೆಳಿಗ್ಗೆ 07:30 ಗಂಟೆಗೆ ಕರ್ನೂಲ್ ಸಿಟಿ ನಿಲ್ದಾಣದಿಂದ ಹೊರಟು, ಅದೇ ದಿನ ಸಂಜೆ 4:15 ಗಂಟೆಗೆ ಹುಬ್ಬಳ್ಳಿ ನಿಲ್ದಾಣಕ್ಕೆ ಆಗಮಿಸಲಿದೆ.
ಈ ರೈಲು ಗದಗ, ಕೊಪ್ಪಳ, ಹೊಸಪೇಟೆ, ತೋರಣಗಲ್ಲು, ಬಳ್ಳಾರಿ, ಗುಂತಕಲ್ ಮತ್ತು ಡೋನ್ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.
ಈ ರೈಲು ಸಾಮಾನ್ತ ದ್ವಿತೀಯ ದರ್ಜೆ(8) ಮತ್ತು ವಿಕಲಾಂಗರ ಬೋಗಿಗಳೊಂದಿಗೆ ಸೆಕೆಂಡ್ ಕ್ಲಾಸ್ ಲಗೇಜ್ ಕಮ್ ಬ್ರೇಕ್ ವ್ಯಾನ್(2) ಸೇರಿದಂತೆ 10 ಬೋಗಿಗಳನ್ನು ಹೊಂದಿರುತ್ತದೆ.
ಪ್ರಯಾಣಿಕರು ಅಧಿಕೃತ ಭಾರತೀಯ ರೈಲ್ವೆ ವೆಬೈಟ್ (www.enquiry.indianrail.gov.in) ಗೆ ಭೇಟಿ ನೀಡುವ ಮೂಲಕ, NTES ಅಪ್ಲಿಕೇಶನ್ ಬಳಸಿ ಅಥವಾ 139 ಗೆ ಡಯಲ್ ಮಾಡುವ ಮೂಲಕ ರೈಲುಗಳ ಆಗಮನ/ನಿರ್ಗಮನ ಸಮಯ ಮತ್ತು ಇತರ ಮಾಹಿತಿಯನ್ನು ಪರಿಶೀಲಿಸಬಹುದು ಎಂದು ನೈರುತ್ಯ ರೈಲ್ವೆ ತಿಳಿಸಿದೆ.