ಬೆಂಗಳೂರು: ರಾಜ್ಯದ ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಗಳಲ್ಲಿ 2,000 ಬೋಧಕ ಮತ್ತು ಬೋಧಕೇತರ ಹುದ್ದೆಗಳ ಭರ್ತಿಗೆ ಶೀಘ್ರದಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರು ತಿಳಿಸಿದ್ದಾರೆ.
ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಮಾಹಿತಿ ನೀಡಿದ ಅವರು, ಉನ್ನತ ಶಿಕ್ಷಣ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳನ್ವಯ ಪದವಿ ಕಾಲೇಜುಗಳ ಪ್ರಾಂಶುಪಾಲರ ಹುದ್ದೆಯನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುತ್ತಿದ್ದು, ಮೆರಿಟ್ ಪಟ್ಟಿಯಲ್ಲಿನ ಅಭ್ಯರ್ಥಿಗಳಿಂದ ಸ್ವೀಕೃತಗೊಂಡ ದಾಖಲೆಗಳು ಪರಿಶೀಲನೆಯ ಹಂತದಲ್ಲಿವೆ. ಶೀಘ್ರವಾಗಿ ತಾತ್ಕಾಲಿಕ ಪಟ್ಟಿ ಪ್ರಕಟಿಸಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದಾರೆ.
ರಾಜ್ಯದ ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಗಳಲ್ಲಿ 2,000 ಬೋಧಕ ಮತ್ತು ಬೋಧಕೇತರ ಹುದ್ದೆಗಳ ಭರ್ತಿಗೆ ಶೀಘ್ರದಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರಾದ @drmcsudhakar ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು. pic.twitter.com/ZNtU3KzKyV
— DIPR Karnataka (@KarnatakaVarthe) March 13, 2025