ಬೆಂಗಳೂರು : ಸಾರಿಗೆ ಇಲಾಖೆಯಲ್ಲಿ ಶೀಘ್ರವೇ 13 ಸಾವಿರ ನೌಕರರ ನೇಮಕಾತಿ ನಡೆಯಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.
ವಿಧಾಸೌಧದ ಮುಂಭಾಗ ನಡೆದ ಪಲ್ಲಕ್ಕಿ ಬಸ್ ಗಳಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅವರು ಮಾತನಾಡಿದರು.
2016 ರಲ್ಲಿ ಸಾರಿಗೆ ಇಲಾಖೆಯಲ್ಲಿ ಚಾಲಕ, ಕಂಡಕ್ಟರ್ ನೇಮಕಾತಿ ಮಾಡಲಾಗಿತ್ತು, ಈಗ ಮತ್ತೆ 13 ಸಾವಿರ ನೌಕರರ ನೇಮಕಾತಿ ಮಾಡಲಾಗುತ್ತದೆ ಎಂದು ಸಚಿವರು ಹೇಳಿದರು,ಸದ್ಯ ಸಾರಿಗೆ ಇಲಾಖೆಯಲ್ಲಿ 24 ಸಾವಿರ ಬಸ್ ಗಳಿದೆ. ಕಳೆದ 4 ವರ್ಷದಿಂದ ಯಾವುದೇ ಬಸ್ ಖರೀದಿ ಮಾಡಿರಲಿಲ್ಲ. ಈಗ 40 ಹೊಸ ಐಷಾರಾಮಿ ಬಸ್ ಗಳನ್ನು ಖರೀದಿ ಮಾಡಲಾಗಿದೆ ಎಂದರು.
ರಾಜ್ಯದಲ್ಲಿ ಇಂದಿನಿಂದ ಕೆಎಸ್ಆರ್ಟಿಸಿ ಪಲ್ಲಕ್ಕಿ ಉತ್ಸವ ಶುರುವಾಗಿದ್ದು, ಸಿಎಂ ಸಿದ್ದರಾಮಯ್ಯನವರು ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ ಮುಂಭಾಗ ಕೆಎಸ್ಆರ್ಟಿಸಿ ಪಲ್ಲಕ್ಕಿ ಉತ್ಸವಕ್ಕೆ ಅಧಿಕೃತ ಚಾಲನೆ ನೀಡಿದ್ದಾರೆ. 40 ನಾನ್ ಎಸಿ ಬಸ್ ಗಳು ಸೇರಿ 148 ಬಸ್ ಗಳಿಗೆ ಚಾಲನೆ ನೀಡಲಾಗಿದ್ದು. 148 ಬಸ್ ಗಳ ಪೈಕಿ 100 ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ