ಬೆಂಗಳೂರು : ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಗ್ರೂಪ್ -ಎ ನ 650 ಸಹಾಯಕ ಪ್ರಾಧ್ಯಾಪಕರು ಮತ್ತು 1200 ನರ್ಸ್ ಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನೇಮಕ ಮಾಡಿಕೊಳ್ಳವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳುವ ಉದ್ದೇಶದಿಂದ ನೇಮಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕವೇ ನೇಮಕ ಭರ್ತಿ ಪ್ರಕ್ರಿಯೆ ಮಾಡಬೇಕೆಂದು ಇಲಾಖೆಗೆ ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ರಾಜ್ಯದಲ್ಲಿ 22 ವೈದ್ಯಕೀಯ ಕಾಲೇಜುಗಳಿದ್ದು, 11 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಸಹ ನಿಯಮದಂತೆ ಹುದ್ದೆಗಳ ನೇಮಕವಾಗಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.